ಮಡಿಕೇರಿ ಏ.5 : ಕರ್ನಾಟಕ ಮಾಸ್ಟರ್ಸ್ ಅಥ್ಲೆಟಿಕ್ ಅಸೋಸಿಯೇಷನ್ ವತಿಯಿಂದ ನಡೆದ 42 ನೇ ರಾಷ್ಟ್ರೀಯ ವೆಟರನ್ ಅಥ್ಲೆಟಿಕ್ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಮಡಿಕೇರಿಯ ಜಿಲ್ಲಾಸ್ಪತ್ರೆಯ ಶುಶ್ರೂಷಕ ಅಧಿಕಾರಿ ಬಿ.ವಸಂತಿ ಅವರು ಎರಡು ಪದಕಗಳನ್ನು ಗೆದ್ದಿದ್ದಾರೆ.
ಬೆಂಗಳೂರಿನ ಕಂಠೀರವ ಸ್ಟೇಡಿಯಂ ನಲ್ಲಿ ನಡೆದ 400 ಮೀ ಓಟದಲ್ಲಿ ಬೆಳ್ಳಿ ಪದಕ ಮತ್ತು 100 ಮೀ ನಲ್ಲಿ ಕಂಚಿನ ಪದಕ ತಮ್ಮದಾಗಿಸಿಕೊಂಡು ಅಂತರಾಷ್ಟ್ರೀಯ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಇತ್ತೀಚೆಗೆ ಮೈಸೂರಿನ ಚಾಮುಂಡೇಶ್ವರಿ ಸ್ಟೇಡಿಯಂನಲ್ಲಿ ನಡೆದ ಸರಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ 100 ಮೀ ಓಟದಲ್ಲಿ ಬೆಳ್ಳಿ ಪದಕ ಗೆದ್ದು ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದರು.
ಬಿ.ವಸಂತಿ ಅವರು ಜಿಲ್ಲಾ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸರಕಾರಿ ಆಸ್ಪತ್ರೆಯಲ್ಲಿ ಶುಶ್ರೂಷಕ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ, ಇತ್ತೀಚೆಗೆ ಮೈಸೂರು ಕೆ.ಆರ್.ಆಸ್ಪತ್ರೆಯಲ್ಲಿ ಹಿರಿಯ ಶುಶ್ರೂಕ ಅಧಿಕಾರಿಯಾಗಿ ಬಡ್ತಿ ಹೊಂದಿದ್ದಾರೆ. ಇವರು ಅನೇಕ ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಪಾಲ್ಗೊಂಡು ಕೊಡಗು ಜಿಲ್ಲೆ ಹಾಗೂ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ್ದಾರೆ.
Breaking News
- *ವೀರ ಸೇನಾನಿಗಳಿಗೆ ಅಗೌರವ : ಕಿಡಿಗೇಡಿಯನ್ನು ಬಂಧಿಸಲು ನಾಪೋಕ್ಲು ಕೊಡವ ಸಮಾಜ ಒತ್ತಾಯ*
- *ಇಂದಿರಾ ನಗರ : ನೂತನ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*
- *ವೀರ ಸೇನಾನಿಗಳಿಗೆ ಅಪಮಾನ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಖಂಡನೆ*
- *ವೀರ ಸೇನಾನಿಗಳಿಗೆ ಅಗೌರವ : ಜಿಲ್ಲಾ ಬಿಜೆಪಿಯಿಂದ ಎಸ್ಪಿಗೆ ದೂರು*
- *ಮಡಿಕೇರಿಯಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ*
- *ಜಿಲ್ಲಾ ಮಟ್ಟದ ಯುವಜನೋತ್ಸವ : ಹೆಸರು ನೋಂದಾಯಿಸಿಕೊಳ್ಳಲು ನ.28 ಕೊನೆ ದಿನ*
- *ನ.26 ರಂದು ಸಿಎನ್ಸಿಯಿಂದ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ನ.24 ರಂದು ಕೊಡಗು ಜಿಲ್ಲಾ ಕಿವುಡರ ಸಂಘದ ಸಭೆ*
- *ಕುಶಾಲನಗರದಲ್ಲಿ ಅಕ್ಷರ ಜ್ಯೋತಿ ಯಾತ್ರೆಗೆ ಸ್ವಾಗತ : ಉತ್ತಮ ಸಂಸ್ಕಾರ, ಸದ್ಗುಣ ಬೆಳೆಸಿಕೊಳ್ಳಲು ಬಸವಕುಮಾರ್ ಪಾಟೀಲ್ ಕರೆ*
- *ನ.29 ರಂದು ಮೂರ್ನಾಡುವಿನಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ*