ಮಡಿಕೇರಿ ಏ.5 : ಕಾಂಗ್ರೆಸ್ ಆಡಳಿತಾವಧಿಯಲ್ಲಿ ಈ ದೇಶದ ಸರ್ವಾಂಗೀಣ ಅಭಿವೃದ್ಧಿಗಾಗಿ ಅನೇಕ ಕಾರ್ಯಕ್ರಮಗಳನ್ನು ಜಾರಿಗೆ ತರಲಾಯಿತು. ಆದರೆ ಇಂದು ಬಿಜೆಪಿ ನೇತೃತ್ವದ ಸರ್ಕಾರ ಇದೆಲ್ಲವನ್ನು ಹಾಳು ಮಾಡುತ್ತಿದೆ ಎಂದು ಕಾಂಗ್ರೆಸ್ ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪ ಅವರು ಆರೋಪಿಸಿದ್ದಾರೆ.
ಸಿದ್ದಾಪುರದ ಸ್ವರ್ಣಮಾಲಾ ಕಲ್ಯಾಣ ಮಂಟಪದಲ್ಲಿ ನಡೆದ ಕಾಂಗ್ರೆಸ್ ಹಿಂದುಳಿದ ವರ್ಗಗಳ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಾಂಗ್ರೆಸ್‌ನ ‘ಗ್ಯಾರಂಟಿ ಕಾರ್ಡ್’ ವಿಶ್ವಾಸಾರ್ಹವಾಗಿದ್ದು, ಇತರೆ ಪಕ್ಷಗಳ ಗ್ಯಾರಂಟಿಗಳು ನಂಬಿಕೆಗೆ ಅರ್ಹವಾಗಿಲ್ಲ. ಬಿಜೆಪಿ ಸೋಲಿನ ಹತಾಶೆಯಲ್ಲಿದೆ, ಮುಂಬರುವ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದೇ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ದುಡಿಯುವ ವರ್ಗಗಳ ಕೈಗೆ ಭೂಮಿ ಹಕ್ಕು ನೀಡಿದವರು ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸರು, ರೈತರಿಗೆ ಉಚಿತ ವಿದ್ಯುತ್ ಸೌಲಭ್ಯ ಒದಗಿಸಿದವರು ಮಾಜಿ ಮುಖ್ಯಮಂತ್ರಿ ದಿವಂಗತ ಎಸ್.ಬಂಗಾರಪ್ಪನವರೆ ಎಂದು ತಿಳಿಸಿದ ಮಧು ಬಂಗಾರಪ್ಪ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಸಹಾಯಧನದೊಂದಿಗೆ ಅಡುಗೆ ಸಿಲಿಂಡರ್ ನೀಡಿದರು. ಆದರೆ ಈಗ ಸಿಲಿಂಡರ್ ದರ ಗಗನಕ್ಕೆ ಏರಿರುವುದರಿಂದ ಗ್ಯಾಸ್ ಸ್ಟೌಗಳು ಮೂಲೆ ಸೇರಿದ್ದು, ಮಹಿಳೆಯರು ಸೌದೆ ಒಲೆಯಲ್ಲಿ ಅಡುಗೆ ಮಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.
ರಾಜ್ಯದ ಜನತೆ ಈ ಬಾರಿ ಬದಲಾವಣೆ ಬಯಸಿದ್ದು, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಿತ. ಈ ಹಿನ್ನೆಲೆಯಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎ.ಎಸ್.ಪೊನ್ನಣ್ಣ ಅವರನ್ನು ಮತದಾರರು ಆಶೀರ್ವದಿಸುವಂತೆ ಮಧು ಬಂಗಾರಪ್ಪ ಮನವಿ ಮಾಡಿದರು.
ವಿರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎ.ಎಸ್.ಪೊನ್ನಣ್ಣ ಮಾತನಾಡಿ, ನಾನು ಭೇಟಿ ನೀಡಿದ ಗ್ರಾಮಗಳಲ್ಲಿ ಜನರು ನಮಗೆ ರಸ್ತೆ, ಕುಡಿಯುವ ನೀರು, ವಾಸಕ್ಕೆ ಮನೆ ನೀಡಿ ಎಂದು ಕೇಳುತ್ತಿದ್ದಾರೆ. ಕಳೆದ ಎರಡು ದಶಕಗಳಿಂದ ಈ ಕ್ಷೇತವನ್ನು ಪ್ರತಿನಿಧಿಸಿದವರು ಜನರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿದರು.
ವಿರಾಜಪೇಟೆ ಕ್ಷೇತ್ರದಲ್ಲಿ ಪಕ್ಷವನ್ನು ಗೆಲ್ಲಿಸಿದ್ದೇ ಆದಲ್ಲಿ ನಿಮ್ಮ ಮನೆಬಾಗಿಲಿನ ಸೇವಕನಂತೆ ನಿಂತು ಗ್ರಾಮಕ್ಕೆ ರಸ್ತೆ, ಕುಡಿಯುವ ನೀರು ಸೇರಿದಂತೆ ಮೂಲಭೂತ ಸಮಸ್ಯೆಗಳನ್ನು ಬಗೆಹರಿಸಲು ಶ್ರಮಿಸುತ್ತೇನೆ. ಜನರ ಭಾವನೆಗಳ ಜತೆ ಚೆಲ್ಲಾಟವಾಡುವಂತಹ ಮಾತುಗಳಿಗೆ ಮರುಳಾಗಬೇಡಿ ಎಂದರು.
ಬದಲಾವಣೆಯ ಪರ್ವಕಾಲ ಬಂದಿದೆ, ಸುವರ್ಣ ಅವಕಾಶವನ್ನು ಕಳೆದುಕೊಳ್ಳದೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಎಂದು ಪೊನ್ನಣ್ಣ ಮನವಿ ಮಾಡಿದರು.
ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ಜಿಲ್ಲಾಧ್ಯಕ್ಷ ಬಾನಂಡ ಪ್ರಥ್ಯು ಅಧ್ಯಕ್ಷತೆಯಲ್ಲಿ ನಡೆದ ಸಮಾವೇಶದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ಹಿಂದುಳಿದ ವರ್ಗದ ರಾಜ್ಯ ಉಪಾಧ್ಯಕ್ಷ ಬಾಲಕೃಷ್ಣ, ಮಾಜಿ ಸಚಿವೆ ಸುಮಾವಸಂತ್, ಮಾಜಿ ಎಂಎಲ್‌ಸಿ ಅರುಣ್ ಮಾಚಯ್ಯ, ರಾಜ್ಯ ವಕ್ತಾರ ಸಂಕೇತ್ ಪೂವಯ್ಯ, ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾದ ಟಿ.ಪಿ.ರಮೇಶ್, ವಿರಾಜಪೇಟೆ ಬ್ಲಾಕ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ನಾಪೋಕ್ಲು ಬ್ಲಾಕ್ ಅಧ್ಯಕ್ಷ ಇಸ್ಮಾಯಿಲ್, ಪೊನ್ನಂಪೇಟೆ ಬ್ಲಾಕ್ ಅಧ್ಯಕ್ಷ ಮಿದೇರಿರ ನವೀನ್ ಮೊದಲಾದ ಗಣ್ಯರು ಪಾಲ್ಗೊಂಡಿದ್ದರು.
ಸಮಾವೇಶಕ್ಕೂ ಮೊದಲು ಅಯ್ಯಪ್ಪ ದೇವಸ್ಥಾನದ ಮುಂಭಾಗದಿoದ ಸಭಾಂಗಣದವರೆಗೆ ಕಾಂಗ್ರೆಸ್ ಪ್ರಮುಖರು ಹಾಗೂ ಕಾರ್ಯಕರ್ತರ ಬೃಹತ್ ಮೆರವಣಿಗೆ ನಡೆಯಿತು.
Breaking News
- *ಕುಶಾಲನಗರದಲ್ಲಿ ಅಕ್ಷರ ಜ್ಯೋತಿ ಯಾತ್ರೆಗೆ ಸ್ವಾಗತ : ಉತ್ತಮ ಸಂಸ್ಕಾರ, ಸದ್ಗುಣ ಬೆಳೆಸಿಕೊಳ್ಳಲು ಬಸವಕುಮಾರ್ ಪಾಟೀಲ್ ಕರೆ*
- *ನ.29 ರಂದು ಮೂರ್ನಾಡುವಿನಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ*
- *ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಿಂದ ರಾಷ್ಟ್ರೀಯ ಅಪಸ್ಮಾರ (ಮೂರ್ಛೆರೋಗ) ದಿನಾಚರಣೆ*
- *ವೀರ ಸೇನಾನಿಗಳಿಗೆ ಅಗೌರವ : ಕೊಡವ ಮಕ್ಕಡ ಕೂಟ ಖಂಡನೆ : ಕಿಡಿಗೇಡಿಯ ಬಂಧನಕ್ಕೆ ಆಗ್ರಹ*
- *ಮೂರ್ನಾಡು ಫ್ರೆಂಡ್ಸ್ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ವಾರ್ಷಿಕ ಮಹಾಸಭೆ : ನೂತನ ಪದಾಧಿಕಾರಿಗಳ ಆಯ್ಕೆ*
- *ನಿಧನ ಸುದ್ದಿ*
- *ರಾಜ್ಯ ಸರ್ಕಾರದ ವಿರುದ್ಧ ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ : “ವಕ್ಫ್ ಕಾಯ್ದೆ” ಹಿಂಪಡೆಯಲು ಒತ್ತಾಯ : ಪ್ರತಾಪ್ ಸಿಂಹ ವಾಗ್ಧಾಳಿ*
- *ಶಾಲಾ ಮಕ್ಕಳ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*
- *ಕನ್ನಡ ರಾಜ್ಯೋತ್ಸವ : ನ.23 ರಂದು ಮಡಿಕೇರಿಯಲ್ಲಿ ರಸಪ್ರಶ್ನೆ ಮತ್ತು ಗೀತಗಾಯನ ಕಾರ್ಯಕ್ರಮ*
- *ಗಂಗಮ್ಮ ನಿಧನ : ಶಾಸಕ ಪೊನ್ನಣ್ಣ ಸಂತಾಪ*