ಸೋಮವಾರಪೇಟೆ ಏ.6 : ಸೋಮವಾರಪೇಟೆ ತಾಲ್ಲೂಕು ಆಡಳಿತದಿಂದ ಡಾ.ಬಾಬು ಜಗಜೀವನ್‍ರಾಂ ಅವರ 116ನೇ ಜನ್ಮದಿನಾಚರಣೆಯನ್ನು ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಆಚರಿಸಲಾಯಿತು.
ತಹಶೀಲ್ದಾರ್ ಎಸ್.ಎನ್.ನರಗುಂದ ಅವರು ಜಗಜೀವನ್ ರಾಮ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ವಿ.ಜಯಣ್ಣ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಚಂದ್ರಪ್ಪ ಸೇರಿದಂತೆ ವಿವಿಧ ಇಲಾಖಾಧಿಕಾರಿಗಳು ಹಾಜರಿದ್ದರು.












