ಕುಶಾಲನಗರ ಏ.7 : ಕುಶಾಲನಗರದ ಮುಳ್ಳುಸೋಗೆ ಗ್ರಾಮ ಪಂಚಾಯಿತಿ ಕೇಂದ್ರ ಸರ್ಕಾರ ನೀಡುವ ರಾಷ್ಟ್ರಮಟ್ಟದ “ನಾನಾಜಿ ದೇಶಮುಖ್ ಸರ್ವೋತ್ತಮ್ ಪಂಚಾಯತ್ ಸತತ ವಿಕಾಸ್” ಪುರಸ್ಕಾರ ಕ್ಕೆ ಆಯ್ಕೆಯಾಗಿದೆ.
2023 ನೇ ಸಾಲಿನ ರಾಷ್ಟ್ರೀಯ ಪಂಚಾಯತ್ ಪುರಸ್ಕಾರಗಳನ್ನು ಘೋಷಿಸಲಾಗಿದ್ದು ಕರ್ನಾಟಕ ರಾಜ್ಯದಿಂದ ಆಯ್ಕೆಯಾಗಿರುವ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಮುಳ್ಳುಸೋಗೆ ಗ್ರಾಮ ಪಂಚಾಯಿತಿ ಪ್ರಶಸ್ತಿಯ ಹೆಗ್ಗಳಿಕೆಗೆ ಪಾತ್ರವಾಗಿದೆ
ನಾನಾಜಿ ದೇಶಮುಖ್ ಸರ್ವೋತ್ತಮ್ ಪಂಚಾಯ್ತಿ ಸತತ ವಿಕಾಸ ಪುರಸ್ಕಾರ ರಾಷ್ಟ್ರಮಟ್ಟದಲ್ಲಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿದ ಗ್ರಾಮ ಪಂಚಾಯಿತಿಗಳಿಗೆ ನೀಡಲಾಗುತ್ತಿದ್ದು
ಪ್ರಥಮ ಬಹುಮಾನ 1.5 ಕೋಟಿ ಎರಡನೇ ಬಹುಮಾನ 75 ಲಕ್ಷ ಹಾಗೂ ಮೂರನೇ ಬಹುಮಾನ ಮೊತ್ತ 50 ಲಕ್ಷ ರೂಪಾಯಿಗಳಾಗಿರುತ್ತದೆ.
2021-22 ನೇ ಸಾಲಿನಲ್ಲಿ ಹಲವಾರು ವೈವಿಧ್ಯಮಯ ಕಾರ್ಯಕ್ರಮಗಳನ್ನು ರೂಪಿಸುವ ಮೂಲಕ ಗ್ರಾಮ ಪಂಚಾಯಿತಿ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದೆ. ಮುಳ್ಳುಸೋಗೆ ಗ್ರಾಮ ಪಂಚಾಯಿತಿಗೆ ಇದೀಗ 1.5 ಕೋಟಿ ರೂ. ಪ್ರಥಮ ಸ್ಥಾನಕ್ಕೆ ಆಯ್ಕೆ ಮಾಡಿದೆ.
ಇದೀಗ ಮುಳ್ಳುಸೋಗೆ ಗ್ರಾಮ ಪಂಚಾಯಿತಿ ಈ ಸಾಲಿನ ಫೆಬ್ರವರಿ ಯಿಂದ ಕುಶಾಲನಗರ ಪುರಸಭೆ ವ್ಯಾಪ್ತಿಗೆ ಸೇರ್ಪಡೆಗೊಂಡಿದೆ.