ಸೋಮವಾರಪೇಟೆ ಏ.9 : ಚಿಲ್ಲರೆ ಅಂಗಡಿಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಚಿಲ್ಲರೆ ಅಂಗಡಿಗೆ ದಾಳಿ ನಡೆಸಿದ ಅಬಕಾರಿ ಅಧಿಕಾರಿಗಳು 17.280 ಲೀ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.
ಐಗೂರು ಸಮೀಪದ ಯಡವಾರೆ ಗ್ರಾಮ ನಿವಾಸಿಯೊಬ್ಬರು ತನ್ನ ಚಿಲ್ಲರೆ ಅಂಗಡಿಯಲ್ಲಿ ಮದ್ಯ ಮಾರಾಟ ಮಾಡುತ್ತಿದ್ದ ಮಾಹಿತಿ ಪಡೆದ ಅಧಿಕಾರಿಗಳು ಈಚೆಗೆ ದಾಳಿ ನಡೆಸಿದ್ದರು. ಉಪ ವಿಭಾಗ ಅಬಕಾರಿ ಅಧೀಕ್ಷಕರಾದ ಆರ್.ಎಂ. ಚೈತ್ರಾ ಅರೋಪಿ ವಿರುದ್ಧ ಮೊಕದ್ದಮೆ ದಾಖಲಿಸಿದ್ದಾರೆ.










