ಮಡಿಕೇರಿ ಏ.10 : ಕಾರು ಮತ್ತು ಸಾರಿಗೆ ಬಸ್ ನಡುವೆ ಅಪಘಾತ ಸಂಭವಿಸಿದ ಘಟನೆ ಸೀಗೆತೋಡುವಿನಲ್ಲಿ ನಡೆದಿದೆ. ತಿರುಪತಿಯಿಂದ ಗೋಣಿಕೊಪ್ಪಲು ಮಾರ್ಗವಾಗಿ ಮೂರ್ನಾಡುವಿಗೆ ತೆರಳುತ್ತಿದ್ದ ಕಾರಿಗೆ ಪಿರಿಯಾಪಟ್ಟಣದಿಂದ ಗೋಣಿಕೊಪ್ಪಲಿಗೆ ಬರುತ್ತಿದ್ದ ರಾಜ್ಯ ರಸ್ತೆ ಸಾರಿಗೆ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಕಾರು ಜಖಂ ಗೊಂಡಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ .
ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.








