ಮಡಿಕೇರಿ ಏ.10 : ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ ಹೆಗಡೆ ಅವರನ್ನು ಭೇಟಿಯಾದ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ನಿಯೋಗ ಸರ್ಕಾರಿ ದಾಖಲೆಗಳಲ್ಲಿ “ಕೊಡವ” ಎಂಬ ಶಾಸ್ತ್ರೀಯ ಪದ ಬಳಕೆಯ ಕುರಿತು ಚರ್ಚಿಸಿತು.
ಬೆಂಗಳೂರಿನ ದೇವರಾಜ ಅರಸು ಭವನದಲ್ಲಿರುವ ಹಿಂದುಳಿದ ವರ್ಗಗಳ ಆಯೋಗದ ಕಛೇರಿಯಲ್ಲಿ ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಮತ್ತಿತರರು ಹೆಗಡೆ ಅವರನ್ನು ಭೇಟಿಯಾಗಿ ನ್ಯಾಯಾಲಯದ ಆದೇಶವಿದ್ದರೂ ಸರ್ಕಾರ “ಕೊಡವ” ಪದ ಬಳಕೆಗೆ ಕ್ರಮ ಕೈಗೊಳ್ಳದಿರುವುದನ್ನು ಮತ್ತೊಮ್ಮೆ ಕಾನೂನಿನ ಮೂಲಕ ಪ್ರಶ್ನಿಸುವುದಾಗಿ ತಿಳಿಸಿದರು.
ಉಚ್ಚ ನ್ಯಾಯಾಲಯದ ತೀರ್ಪಿನ ಪ್ರಕಾರ ಗೆಜೆಟ್ ಅಧಿಸೂಚನೆಯ ಮೂಲಕ ಎಲ್ಲಾ ಸರ್ಕಾರಿ ದಾಖಲೆಗಳಲ್ಲಿ ಕೊಡವ ಎಂಬ ಶಾಸ್ತ್ರೀಯ ಪದವನ್ನು ಅಳವಡಿಸುವ ಕುರಿತು ಚರ್ಚಿಸಲಾಗಿದೆ. 2021 ಡಿ.8 ರಂದು, ಡಾ.ದ್ವಾರಕನಾಥ್ ಆಯೋಗದ ವರದಿ ಕೂಡ ಇದನ್ನು ಶಿಫಾರಸು ಮಾಡಿದೆ.
ಹೈಕೋರ್ಟ್ ತೀರ್ಪು ನೀಡಿ ಈಗಾಗಲೇ 16 ತಿಂಗಳು ಕಳೆದಿದೆ. ಆದರೆ ಆದೇಶವನ್ನು ಅನುಷ್ಠಾನಗೊಳಿಸುವ ಬದ್ಧತೆಯನ್ನು ಸರ್ಕಾರ ಪ್ರದರ್ಶಿಸುತ್ತಿಲ್ಲ. ಈಗಾಗಲೇ ಕರ್ನಾಟಕ ಹೈಕೋರ್ಟ್ ನಲ್ಲಿ ಸಂಬಂಧಪಟ್ಟವರ ವಿರುದ್ದ ನಾವು ನ್ಯಾಯಾಂಗ ನಿಂದನೆ ಪ್ರಕ್ರಿಯೆಗಳನ್ನು ಪ್ರಾರಂಭಿಸಿದ್ದೇವೆ ಎಂದು ನಾಚಪ್ಪ ಹೇಳಿದರು.
ಕೊಡವರ ಮಾತೃಭೂಮಿ ಇದಾಗಿದ್ದು, ಕೊಡವ ಜನಾಂಗದ ಗುರುತು ಮತ್ತು ಅಸ್ತಿತ್ವವೇ ಇಲ್ಲಿದೆ. ಆದರೆ ಒಡೆದು ಆಳುವ ನೀತಿಯ ಜನಪ್ರತಿನಿಧಿಯೊಬ್ಬರು ಹಾಗೂ ವಿದ್ವಾಂಸರೊಬ್ಬರಿಂದ ಕೊಡವರ ಹಕ್ಕುಗಳಿಗೆ ದಕ್ಕೆಯಾಗುತ್ತಿದೆ. ವಲಸಿಗರು ತಾವೇ ಕೊಡವರೆಂದು ಪ್ರತಿಬಿಂಬಿಸಿಕೊಳ್ಳುವ ಮೂಲಕ ಈ ಮಣ್ಣಿನ ನೈಜ ಬುಡಕಟ್ಟು ಜನಾಂಗ ಕೊಡವರ ಹಕ್ಕುಗಳನ್ನು ಕಸಿದುಕೊಳ್ಳುವ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಕೊಡವ ಬ್ರ್ಯಾಂಡ್ ನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂದು ವಿವರಿಸಿದರು.
ಸಿಎನ್‌ಸಿ ಪ್ರಮುಖರಾದ ಕಲಿಯಂಡ ಪ್ರಕಾಶ್, ಲೆಫ್ಟಿನೆಂಟ್ ಕರ್ನಲ್ ಬಿ.ಎಂ.ಪಾರ್ವತಿ, ಕಲಿಯಂಡ ಮೀನಾ ಪ್ರಕಾಶ್ ಮತ್ತಿತರರು ನಿಯೋಗದಲ್ಲಿದ್ದರು.
ಭೇಟಿಯ ನಂತರ ಮಾತನಾಡಿದ ಎನ್.ಯು.ನಾಚಪ್ಪ ಆಯೋಗದ ಅಧ್ಯಕ್ಷ ಜಯಪ್ರಕಾಶ ಹೆಗಡೆ ಅವರು ಅತ್ಯಂತ ಪ್ರಾಮಾಣಿಕ ವ್ಯಕ್ತಿ. ಕೊಡವರ ಕಾನೂನುಬದ್ಧ ಆಕಾಂಕ್ಷೆಗಳಿಗೆ ಅವರು ವೈಯಕ್ತಿಕವಾಗಿ ಆಸಕ್ತಿ ವಹಿಸಿದರು. ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಚುನಾವಣೆ ಮುಗಿದ ತಕ್ಷಣ ಆಡಳಿತ ಲೋಪ ಸರಿಪಡಿಸಲಾಗುವುದು ಎಂದು ಭರವಸೆ ನೀಡಿರುವುದಾಗಿ ತಿಳಿಸಿದರು.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*