ಬೆಂಗಳೂರು ಏ.11 : ಚುನಾವಣಾ ರಾಜಕೀಯದಿಂದ ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ನಿವೃತ್ತರಾಗಿದ್ದಾರೆ.
ಈ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಬಿ.ನಡ್ಡಾ ಅವರಿಗೆ ಪತ್ರ ಬರೆದಿರುವ ಅವರು, ನಾನು ಸ್ವ-ಇಚ್ಚೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತನಾಗಲು ಬಯಸಿದ್ದೇನೆ. ಹಾಗಾಗಿ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ನನ್ನ ಹೆಸರನ್ನು ಪರಿಗಣಿಸಬಾರದು ಎಂದು ವಿನಂತಿಸುತ್ತೇನೆ ಎಂದಿದ್ದಾರೆ.
ಕಳೆದ 40ಕ್ಕೂ ಹೆಚ್ಚು ವರ್ಷ ರಾಜಕೀಯ ಜೀವನದಲ್ಲಿ ಬೂತ್ ಮಟ್ಟದಿಂದ ರಾಜ್ಯ ಉಪ-ಮುಖ್ಯಮಂತ್ರಿಯವರೆಗೆ ಗೌರವ ಸ್ಥಾನಮಾನವನ್ನು ನೀಡಿದ ಪಕ್ಷದ ಹಿರಿಯರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದಿದ್ದಾರೆ.







