ಮಡಿಕೇರಿ ಏ.11 : ಸಸ್ಯಗಳ ಲೋಕ, ಪ್ರಾಕೃತಿಕ ಸೌಂದರ್ಯ ಒಳಗೊಂಡಿರುವ ರಾಜಸೀಟು ಉದ್ಯಾನವನದಲ್ಲಿ ಜಿಫ್‍ಲೈನ್ ಸಾಹಸ ಕ್ರೀಡೆಯು ಸೇರ್ಪಡೆಯಾಗಿದೆ.
ನಗರದ ರಾಜಸೀಟು ಉದ್ಯಾನವನದಲ್ಲಿ ಜಿಫ್‍ಲೈನ್ ಸಾಹಸ ಕ್ರೀಡೆಗೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಮತ್ತು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರರಾಜ್ ಚಾಲನೆ ನೀಡಿದರು.
ಸ್ವತಃ ತಾವೇ ಜಿಫ್‍ಲೈನ್‍ನಲ್ಲಿ ಸಾಹಸ ಕ್ರೀಡೆಯಲ್ಲಿ ಪಾಲ್ಗೊಂಡು ಗಮನಸೆಳೆದರು. ಬಳಿಕ ಜಿಫ್‍ಲೈನ್ ಸಾಹಸ ಕ್ರೀಡೆಯ ಅನುಭವ ಹಂಚಿಕೊಂಡ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಒಟ್ಟು 310 ಮೀಟರ್ ಉದ್ದದ ಜಿಫ್‍ಲೈನ್ ಅಳವಡಿಸಲಾಗಿದೆ ಎಂದರು.
ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಬೇಕು. ಜೊತೆಗೆ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿಯಿಂದ ಸುರಕ್ಷತೆ ಸಂಬಂಧ ಪ್ರಮಾಣ ಪತ್ರ ಪಡೆಯಬೇಕು. ಜೊತೆಗೆ ಸಾಹಸ ಅಕಾಡೆಮಿಯ ಅಗತ್ಯ ಮಾರ್ಗದರ್ಶನ ಪಾಲಿಸುವಂತೆ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಿಗೆ ಸೂಚಿಸಿದರು.
ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಎಚ್.ಆರ್.ನಾಯಕ್ ಅವರು ಜಿಫ್‍ಲೈನ್ ಸಾಹಸ ಕ್ರೀಡೆಯಲ್ಲಿ ಪಾಲ್ಗೊಳ್ಳಲು ಒಬ್ಬರಿಗೆ 300 ರೂ. ನಿಗದಿ ಮಾಡಲಾಗಿದೆ ಎಂದರು.
ಇಲಾಖಾ ಖಾಸಗಿ ಸಹಭಾಗಿತ್ವದಲ್ಲಿ ಜಿಪ್‍ಲೈನ್ ಸಾಹಸ ಕ್ರೀಡೆ ನಡೆಯಲಿದೆ. ಬೆಂಗಳೂರು ಸಂಸ್ಥೆಯವರು 5 ವರ್ಷದ ವರೆಗೆ ನಿರ್ವಹಿಸಲಿದ್ದಾರೆ ಎಂದು ಎಚ್.ಆರ್.ನಾಯಕ್ ಅವರು ಹೇಳಿದರು.
ಜಿಫ್‍ಲೈನ್ ಸಾಹಸ ಕ್ರೀಡೆಯ ಸುರಕ್ಷತೆ ಸಂಬಂಧಿಸಿದಂತೆ ನಿಧಿನ್ ಅವರು ಮಾಹಿತಿ ನೀಡಿದರು. ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಪ್ರಮೋದ್, ನಿರ್ಮಿತಿ ಕೇಂದ್ರದ ಎಂಜಿನಿಯರ್ ರಾಘವೇಂದ್ರ, ಪೊನ್ನಚ್ಚನ ಮಧು ಇತರರು ಇದ್ದರು.
Breaking News
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್‍ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*