ಮಡಿಕೇರಿ ಏ.11 : ಪೀಪಲ್ಸ್ ಮೂಮೆಂಟ್ ಫಾರ್ ಹ್ಯೂಮನ್ ರೈಟ್ಸ್ ಮತ್ತು ವೀರನಾಡು ರಕ್ಷಣಾ ವೇದಿಕೆಯ ಅಧ್ಯಕ್ಷರಾಗಿರುವ ಶ್ರೀ ಕೃಷ್ಣ ಗೋಶಾಲೆಯ ಸಂಸ್ಥಾಪಕ ಅಧ್ಯಕ್ಷ ಹರೀಶ್ ಜಿ.ಆಚಾರ್ಯ ಅವರು ಮಡಿಕೇರಿ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ.
ಏ.13 ರಂದು ಮಡಿಕೇರಿಯಲ್ಲಿ ನಾಮಪತ್ರ ಸಲ್ಲಿಸುವುದಾಗಿ ತಿಳಿಸಿರುವ ಅವರು, ಕೊಡಗಿನ ಜನ ಬದಲಾವಣೆಯನ್ನು ಬಯಸುತ್ತಿದ್ದು, ನಮ್ಮಂತಹ ಸಾಮಾನ್ಯ ವ್ಯಕ್ತಿಗಳು ಚುನಾವಣೆಯಲ್ಲಿ ಸ್ಪರ್ಧಿಸಲು ಕಾಲ ಪಕ್ವವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಈ ಹಿಂದೆ ಶಿವಸೇನೆ ಮತ್ತು ಹಿಂದೂಮಹಾಸಭಾದ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ರಾಜಕೀಯವಾಗಿ ತೊಡಗಿಸಿಕೊಂಡಿದ್ದೆ. ನಂತರದ ದಿನಗಳಲ್ಲಿ ಪೀಪಲ್ಸ್ ಮೂಮೆಂಟ್ ಫಾರ್ ಹ್ಯೂಮನ್ ರೈಟ್ಸ್ ಮತ್ತು ವೀರನಾಡು ರಕ್ಷಣಾ ವೇದಿಕೆಯ ಅಧ್ಯಕ್ಷನಾಗಿ ಅನೇಕ ಜನಪರ ಹೋರಾಟಗಳನ್ನು ಮಾಡಿದ್ದೇನೆ. ಜನರ ಸಮಸ್ಯೆಗಳಿಗೆ ಸ್ಪಂದಿಸಿ ಮೂಲಭೂತ ಸೌಲಭ್ಯಗಳ ಕೊರತೆಯ ಕುರಿತು ಆಡಳಿತ ವ್ಯವಸ್ಥೆಯ ಗಮನ ಸೆಳೆದಿದ್ದೇನೆ.
2018 ರಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದಲ್ಲಿ ಸಿಲುಕಿ ಅನಾಥವಾಗಿ ಅಲೆದಾಡುತ್ತಿದ್ದ ಗೋವುಗಳಿಗೆ ಆಶ್ರಯ ನೀಡುವ ಸಲುವಾಗಿ ಶ್ರೀಕೃಷ್ಣ ಗೋಶಾಲೆಯನ್ನು ಸ್ಥಾಪಿಸಿದ್ದೇನೆ. ಆ ಮೂಲಕ ನೈಜ ಗೋಪ್ರೀತಿಯನ್ನು ತೋರಿಸಿದ್ದೇನೆ ಮತ್ತು ಗೋರಕ್ಷಣೆಗೆ ಆದ್ಯತೆ ನೀಡಿದ್ದೇನೆ. ಸಿನಿಮಾ ಕ್ಷೇತ್ರದಲ್ಲೂ ಸೇವೆ ಸಲ್ಲಿಸಿದ್ದು, ನನ್ನ ಬಹುತೇಕ ಸಮಯವನ್ನು ಸಮಾಜ ಸೇವೆಗಾಗಿ ಮೀಸಲಿಟ್ಟಿದ್ದೇನೆ. ಜನ ನನ್ನ ಮೇಲೆ ನಂಬಿಕೆ ಇಟ್ಟು ಮತ ನೀಡುತ್ತಾರೆ ಎನ್ನುವ ವಿಶ್ವಾಸವಿದೆ ಎಂದು ಹರೀಶ್ ಜಿ.ಆಚಾರ್ಯ ತಿಳಿಸಿದ್ದಾರೆ.
Breaking News
- *ಸುಂಟಿಕೊಪ್ಪದಲ್ಲಿ ಹಳೆ ವಿದ್ಯಾರ್ಥಿಗಳ ಸ್ನೇಹಮಿಲನ ಕಾರ್ಯಕ್ರಮ : ಸಾಧಕರಿಗೆ ಸನ್ಮಾನ*
- *ಹೆಗ್ಗಳ ಶ್ರೀ ಗೋಪಾಲಕೃಷ್ಣ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಾರ್ಷಿಕ ಮಹಾಪೂಜೆ*
- *ಕೂತಿನಾಡು : ದೇವಾಲಯದ ಜೀರ್ಣೋದ್ಧಾರಕ್ಕೆ ಆರೋಡ ತಾಂಬೂಲ ಪ್ರಶ್ನೆ*
- *ಮಡಿಕೇರಿ : ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯಲ್ಲಿ ವಾರ್ಷಿಕ ಬಹುಮಾನ ವಿತರಣಾ ಸಮಾರಂಭ*
- ಕುಶಾಲನಗರ ಕನ್ನಡ ಭಾರತಿ ಕಾಲೇಜಿನಲ್ಲಿ ಅಕ್ಷರ ಜ್ಯೋತಿ ಯಾತ್ರೆ ಕುರಿತು ಉಪನ್ಯಾಸ : ವಿದ್ಯಾರ್ಥಿಗಳಲ್ಲಿ ಉತ್ತರ ಪ್ರೇರಣೆ, ಸ್ಫೂರ್ತಿ ಬೆಳೆಸಬೇಕು : ಬಸವಕುಮಾರ್ ಪಾಟೀಲ್*
- *ಶ್ರದ್ಧಾಭಕ್ತಿಯಿಂದ ಜರುಗಿದ ಅರಪಟ್ಟು ಶ್ರೀ ಅಯ್ಯಪ್ಪ ಸ್ವಾಮಿ ವಾರ್ಷಿಕ ಮಹಾಪೂಜೆ*
- *ಜಯ ಹೇ ಕರ್ನಾಟಕ ಮಾತೆ ಗೀತೆಗೆ 100 ವರ್ಷ : ಕೊಡಗಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು*
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*