ಮಡಿಕೇರಿ ಏ.12 : ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿ ಬಿಡುಗಡೆ ಮಾಡಲಾಗಿದ್ದು, ಮಡಿಕೇರಿ ಕ್ಷೇತ್ರದಿಂದ ಎಂ.ಪಿ.ಅಪ್ಪಚ್ಚು ರಂಜನ್ ಹಾಗೂ ವಿರಾಜಪೇಟೆ ಕ್ಷೇತ್ರದಿಂದ ಕೆ.ಜಿ.ಬೋಪಯ್ಯ ಅವರಿಗೆ ಮತ್ತೆ ಟಿಕೆಟ್ ನೀಡಲಾಗಿದೆ.
ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಚುನಾವಣಾ ಉಸ್ತುವಾರಿಗಳಾದ ಅರುಣ್ ಸಿಂಗ್, ಧರ್ಮೇಂದ್ರ ಪ್ರಧಾನ್ ಅವರುಗಳು ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದರು.
ಒಟ್ಟು 224 ಕ್ಷೇತ್ರಗಳ ಪೈಕಿ ಮೊದಲ ಪಟ್ಟಿಯಲ್ಲಿ 189 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ.







