ವಿರಾಜಪೇಟೆ ಏ.12 : ಬಿಟ್ಟಂಗಾಲ ಗ್ರಾಮದ ಇತಿಹಾಸ ಪ್ರಸಿದ್ಧ ಶ್ರೀ ಪೊನ್ನಿಮನೆ ಅಯ್ಯಪ್ಪ ಮತ್ತು ಬೋಟೆ ಚಾಮುಂಡಿ ದೇವರ ವಾರ್ಷಿಕ ಉತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು.
ಉತ್ಸವದ ಅಂಗವಾಗಿ ಭಂಡಾರ ಹೊರಡುವುದು, ದೇವಸ್ಥಾನದಲ್ಲಿ ಕೊಟ್ಟಿ ಪಾಟ್ ಮತ್ತು ವಿವಿಧ ಧಾರ್ಮಿಕ ಕೋಲಗಳಾದ ಬೋಟೆ ಚಾಮುಂಡಿ ಹಾಗೂ ವಿಷ್ಣುಮೂರ್ತಿ ದೇವರ ತೆರೆ ಸೇರಿದಂತೆ ವಿವಿಧ ತೆರೆಗಳು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನಡೆಯಿತು.
ವಿವಿಧ ಗ್ರಾಮದ ಭಕ್ತಾದಿಗಳು ಉತ್ಸವದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.









