ಮಡಿಕೇರಿ ಏ.13 : ವಿಶ್ವ ಹಿಂದೂ ಪರಿಷತ್ ನ ಕೊಡಗು ಜಿಲ್ಲಾಧ್ಯಕ್ಷ ಹಾಗೂ ವಕೀಲ ಪಿ.ಕೃಷ್ಣಮೂರ್ತಿ ಅವರ ಕಾರಿನ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣವನ್ನು ಮಡಿಕೇರಿ ವಕೀಲರ ಸಂಘ ತೀವ್ರವಾಗಿ ಖಂಡಿಸಿದೆ.
ಗುoಡು ಹಾರಿಸಿದ ವ್ಯಕ್ತಿಯನ್ನು ತಕ್ಷಣ ಬಂಧಿಸಬೇಕೆoದು ಒತ್ತಾಯಿಸಿ ಕಲಾಪವನ್ನು ನಡೆಸದೆ ಕೋರ್ಟ್ ಎದುರು ವಕೀಲರು ಪ್ರತಿಭಟನೆ ನಡೆಸಿದರು.
ನಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಭೇಟಿಯಾದ ಸಂಘದ ಅಧ್ಯಕ್ಷ ಕೆ.ಡಿ.ದಯಾನಂದ ಹಾಗೂ ಪ್ರಮುಖರು ಸೂಕ್ತ ತನಿಖೆಗಾಗಿ ಒತ್ತಾಯಿಸಿ ಮನವಿ ಪತ್ರ ಸಲ್ಲಿಸಿದರು.










