ಮಡಿಕೇರಿ ಏ.13 : ಸಮಾರಂಭಗಳಲ್ಲಿ ಮದ್ಯವನ್ನು ಬಳಸುವುದು ಕೊಡಗಿನ ಸಂಪ್ರದಾಯವಾಗಿದೆ. ಚುನಾವಣೆ ನೀತಿ ಸಂಹಿತೆಯ ನೆಪದಲ್ಲಿ ಇದಕ್ಕೆ ಕಡಿವಾಣ ಹಾಕುವುದು ಸರಿಯಲ್ಲವೆಂದು ಕೊಡಗು ರಕ್ಷಣಾ ವೇದಿಕೆ ಅಸಮಾಧಾನ ವ್ಯಕ್ತಪಡಿಸಿದೆ.
ಪತ್ರಿಕಾ ಪ್ರಕಟಣೆ ನೀಡಿರುವ ಕೊರವೇ ಅಧ್ಯಕ್ಷ ಅಚ್ಚಂಡೀರ ಪವನ್ ಪೆಮ್ಮಯ್ಯ ಸಮಾರಂಭಗಳಲ್ಲಿ ಮದ್ಯವನ್ನು ಬಳಸದಂತೆ ಕಡಿವಾಣ ಹಾಕಿರುವುದರಿಂದ ಕೊಡಗಿನ ಜನರ ಭಾವನೆಗೆ ದಕ್ಕೆಯಾಗಿದೆ. ಮದ್ಯ ಬಳಕೆಗೆ ಅವಕಾಶ ನೀಡದಿದ್ದರೆ ಕೊಡವ ಸಮಾಜ, ಗೌಡ ಸಮಾಜ ಸೇರಿದಂತೆ ವಿವಿಧ ಸಮಾಜಗಳ ಸಹಕಾರದೊಂದಿಗೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಚುನಾವಣೆ ಸಂದರ್ಭ ರೂ.11,500 ಸನ್ನದು ಶುಲ್ಕ ಪಾವತಿಸಿ ಸಭೆ, ಸಮಾರಂಭಗಳಲ್ಲಿ ಮದ್ಯವನ್ನು ಬಳಕೆ ಮಾಡಲು ಅನುಮತಿ ಪಡೆಯಬಹುದಾಗಿತ್ತು. ಆದರೆ ಅಬಕಾರಿ ಇಲಾಖೆಯ ಅಧಿಕಾರಿಗಳ ಸೂಚನೆಯ ಹಿನ್ನೆಲೆ ಏ.12 ರಿಂದ ಅನುಮತಿ ನೀಡಲಾಗುತ್ತಿಲ್ಲ. ಇದು ತಪ್ಪು ನಿರ್ಧಾರವಾಗಿದ್ದು, ಅಧಿಕಾರಿಗಳು ಜಿಲ್ಲೆಯ ಜನರ ಭಾವನೆಗಳಿಗೆ ದಕ್ಕೆ ತಾರದೆ ತಮ್ಮ ನಿಲುವನ್ನು ಬದಲಾಯಿಸಬೇಕು ಎಂದು ಒತ್ತಾಯಿಸಿದ್ದಾರೆ.
ಕೊಡಗಿನಲ್ಲಿ ಯಾವುದೇ ಸಮಾರಂಭಗಳಲ್ಲಿ ಮದ್ಯವನ್ನು ನ್ಯಾಯಯುತವಾಗಿ ಖರೀದಿಸಿ ವಿತರಿಸಲಾಗುತ್ತದೆ. ಅಲ್ಲದೆ ಇಲ್ಲಿಯವರೆಗೆ ಮದ್ಯ ಸೇವನೆಯಿಂದ ಅಶಾಂತಿ ಸೃಷ್ಟಿಯಾದ ಉದಾಹರಣೆಗಳಿಲ್ಲ. ರಾಜಕಾರಣಿಗಳು ನೀಡುವ ಮದ್ಯವನ್ನು ಬಳಕೆ ಮಾಡುವಷ್ಟು ಕೀಳು ಮಟ್ಟಕ್ಕೆ ಇಲ್ಲಿನ ಜನ ಇಳಿದಿಲ್ಲ. ವಿನಾಕಾರಣ ಜನರಿಗೆ ತೊಂದರೆ ನೀಡದೆ ಯಥಾಸ್ಥಿತಿ ಕಾಯ್ದುಕೊಂಡು ಮದ್ಯ ಬಳಕೆಗೆ ಅವಕಾಶ ನೀಡಬೇಕೆಂದು ಪವನ್ ಪೆಮ್ಮಯ್ಯ ಆಗ್ರಹಿಸಿದ್ದಾರೆ.
Breaking News
- *ಕಟ್ಟೆಮಾಡು ಶ್ರೀ ಮಹಾಮೃತ್ಯುಂಜಯ ದೇವಾಲಯದ ಅರ್ಚಕರ ಮೇಲೆ ಹಲ್ಲೆ : ಕಾಂಗ್ರೆಸ್ ಕಾರ್ಯಕರ್ತ ಅಮಾನತು*
- *ಕಟ್ಟೆಮಾಡು ಗ್ರಾಮದ ಶ್ರೀ ಮಹಾ ಮೃತ್ಯುಂಜಯ ದೇವಸ್ಥಾನದ ಪ್ರಧಾನ ಅರ್ಚಕ ವಿಘ್ನೇಶ್ ಭಟ್ ಮೇಲೆ ಹಲ್ಲೆ*
- *ಸಿಎನ್ಸಿಯಿಂದ ಅಂತರಾಷ್ಟ್ರೀಯ ಹತ್ಯಾಕಾಂಡದ ನೆನಪಿನ ದಿನ ಆಚರಣೆ*
- *ಪದ್ಮಶ್ರೀ ಪುರಸ್ಕೃತ ಡಾ.ವಿಜಯಲಕ್ಷ್ಮಿ ದೇಶಮಾನೆ ಅವರಿಗೆ ಕೊಡಗು ಜಿಲ್ಲಾ ವಿಶ್ವ ಹಿಂದೂ ಪರಿಷದ್, ಬಜರಂಗದಳ, ಮಾತೃಶಕ್ತಿ ದುರ್ಗಾವಾಹಿನಿ ಅಭಿನಂದನೆ*
- *‘ಕೃತಕ ಅಂಗಾಂಗಗಳ ಜೋಡಣೆ ಮತ್ತು ಆರೋಗ್ಯ ತಪಾಸಣೆ’ ಶಿಬಿರ : ಬಡವರಿಗೆ ಅಗತ್ಯ ಆರೋಗ್ಯ ಸೌಲಭ್ಯ : ಸಚಿವ ಭೋಸರಾಜು*
- *ರಾಜ್ಯದಲ್ಲೇ ವಿನೂತನ ಪ್ರಯತ್ನ : ‘ಕೊಡಗು ಪೊಲೀಸ್ ಸಾಂಸ್ಕೃತಿಕ ವೇದಿಕೆ’ ಉದ್ಘಾಟನೆ*
- *ಕೆ.ಎಸ್.ದರ್ಶನ್ ಗೆ ಸಂಗೊಳ್ಳಿ ರಾಯಣ್ಣ ರಾಜ್ಯ ಯುವ ಪ್ರಶಸ್ತಿ ಪ್ರದಾನ*
- *ಕಾಲ್ಚೆಂಡು ಪಂದ್ಯಾವಳಿ : ತ್ರಿವೇಣಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಚಾಂಪಿಯನ್*
- *ವಿರಾಜಪೇಟೆ : ವಿವಿಧತೆಯಲ್ಲಿ ಏಕತೆಕಂಡಿರುವ ಸಂವಿಧಾನವನ್ನು ಗೌರವಿಸುವಂತಾಗಬೇಕು : ವಕೀಲ ಪುಷ್ಪರಾಜ್*
- *ಸೋಮವಾರಪೇಟೆ : ಅಗ್ನಿಶಾಮಕ ಠಾಣೆಯ ನೂತನ ಕಟ್ಟಡ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*