ಮಡಿಕೇರಿ, ಏ. 14: ನಗರದ ಅಶೋಕಪುರದ ಅನ್ನಪೂರ್ಣೇಶ್ವರಿ ದೇವಾಲಯ ಸಮಿತಿ ವತಿಯಿಂದ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು.
ದೇವಾಲಯ ಆವರಣದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸಮರ್ಪಿಸಲಾಯಿತು.
ಪ್ರಮುಖರಾದ ಹೆಚ್. ಆರ್.ಮುತ್ತಪ್ಪ ಮಾತನಾಡಿ, ತಾರತಮ್ಯದ ನಡುವೆ ಶಿಕ್ಷಣವನ್ನು ಅಸ್ತ್ರವನ್ನಾಗಿ ಮಾಡಿಕೊಂಡು ಅಂಬೇಡ್ಕರ್ ಶೋಷಿತರ ಧನಿಯಾಗಿ ಕೆಲಸ ಮಾಡಿದರು. ಪ್ರಜಾಪ್ರಭುತ್ವದ ಬುನಾದಿಯಾದ ಸಂವಿಧಾನ ರಚಿಸುವ ಮೂಲಕ ಸಮಸಮಾಜ ನಿರ್ಮಾಣದಲ್ಲಿ ಅಂಬೇಡ್ಕರ್ ಪಾತ್ರ ಮಹತ್ತರವಾಗಿದೆ. ಅವರ ತತ್ವ, ಆದರ್ಶ ಪ್ರತಿಯೊಬ್ಬರು ಮೈಗೂಡಿಸಿಕೊಳ್ಳಬೇಕೆಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ದೇವಾಲಯ ಸಮಿತಿ ಅಧ್ಯಕ್ಷ ಎಂ. ಜಯರಾಮ್, ಪ್ರಧಾನ ಕಾರ್ಯದರ್ಶಿ ಹೆಚ್.ಟಿ. ವೆಂಕಪ್ಪ, ಉಪಾಧ್ಯಕ್ಷ ಎಂ.ಡಿ. ಧರ್ಮೇಂದ್ರ, ಸಹಕಾರ್ಯದರ್ಶಿ ಎಂ.ಪಿ. ಜಯಪ್ರಕಾಶ್, ಪ್ರಮುಖರಾದ ಹೆಚ್.ಟಿ. ಶಾಮ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
Breaking News
- *ಪ್ರತೀ ಜಿಲ್ಲೆಯಲ್ಲೂ 200 ಆಸನಗಳ ಮಿನಿ ಚಿತ್ರಮಂದಿರ ಸ್ಥಾಪನೆ : ಸಿ.ಎಂ ಘೋಷಣೆ*
- *ಖೋ ಖೋ ವಿಶ್ವಕಪ್ : ರಾಜ್ಯದ ಇಬ್ಬರು ಆಟಗಾರರಿಗೆ ತಲಾ 5 ಲಕ್ಷ ರೂ. ಘೋಷಿಸಿದ ಸಿಎಂ*
- *ರಾಜಾಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನದ ಆಕರ್ಷಣೆ*
- *ರೈಲ್ವೆ ಇಲಾಖೆಯ 32,438 ಗ್ರೂಪ್-ಡಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ*
- *ಭಾಗಮಂಡಲ ಗ್ರಾ.ಪಂ ವತಿಯಿಂದ ಅಂಗನವಾಡಿಗಳಿಗೆ ಕೊಡುಗೆ*
- *ಗಣರಾಜ್ಯೋತ್ಸವದಂದು ಸಿಎನ್ಸಿಯಿಂದ ಶಾಂತಿಯುತ ಹಕ್ಕೊತ್ತಾಯ ಮಂಡನೆ*
- *ಪ್ರಾಣಿ ದಯಾಸಂಘದ ವಾರ್ಷಿಕ ಮಹಾಸಭೆ : ಹಲವು ವಿಚಾರ ಕುರಿತು ಚರ್ಚೆ*
- *ರಾಜಾಸೀಟು ಉದ್ಯಾನದಲ್ಲಿ ಕಣ್ಮನ ಸೆಳೆಯುತ್ತಿರುವ ಫಲಪುಷ್ಪ ಪ್ರದರ್ಶನ : ಶಾಸಕ ಡಾ.ಮಂತರ್ ಗೌಡ ಉದ್ಘಾಟನೆ*
- *ರಾಜಾಸೀಟು ಫಲಪುಷ್ಪ ಪ್ರದರ್ಶನದಲ್ಲಿ ಇತಿಹಾಸ ಪ್ರಸಿದ್ಧ ಶ್ರೀ ಓಂಕಾರೇಶ್ವರ ದೇವಾಲಯದ ಆಕರ್ಷಣೆ*
- *ಮಡಿಕೇರಿಯಲ್ಲಿ ಹಿರಿಯ ನಾಗರಿಕರಿಗೆ ಕಣ್ಣಿನ ತಪಾಸಣಾ ಶಿಬಿರ*