ಮಡಿಕೇರಿ ಏ.14 : ಕಾರು ಹಾಗೂ ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸಂಪಾಜೆಯಲ್ಲಿ ನಡೆದಿದೆ.
ಮಡಿಕೇರಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರು ಹಾಗೂ ಮಂಗಳೂರು ಕಡೆಯಿಂದ ಮಡಿಕೇರಿಗೆ ಬರುತ್ತಿದ್ದ ಸರ್ಕಾರಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಕಾರು ಸಂಪೂರ್ಣ ಜಖಂಗೊಂಡಿದೆ.
ಕಾರಿನಲ್ಲಿದ್ದ ಮಂಡ್ಯ ಜಿಲ್ಲೆಯ 8 ಮಂದಿ ಪ್ರಯಾಣಿಕರಲ್ಲಿ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ತೀವ್ರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಅಪಘಾತದ ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.