ಸಿದ್ದಾಪುರ ಏ.15 : ವಿವಿಧ ಪಕ್ಷಗಳನ್ನು ತೊರೆದು ಹಲವರು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು.
ನೆಲ್ಯಹುದಿಕೇರಿ ವಿ ಎಸ್ ಎಸ್ ಎನ್ ಸಭಾಂಗಣದಲ್ಲಿ ನಡೆದ ಪಕ್ಷ ಸೇರ್ಪಡೆ ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಡಾ. ಮಂತರ್ ಗೌಡ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ ಎರಡು ವಿಧಾನಸಭಾ ಕ್ಷೇತ್ರಗಳಲ್ಲೂ ಮತದಾರರು ಬದಲಾವಣೆ ಬಯಸುವುದರೊಂದಿಗೆ ಕಾಂಗ್ರೆಸ್ನತ್ತ ಒಲವು ತೋರುತ್ತಿದ್ದು ಕಾರ್ಯಕರ್ತರು ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕೆಂದು ಕರೆ ನೀಡಿದರು ಇದೇ ಸಂದರ್ಭ ಕಾಂಗ್ರೆಸ್ ಸೇರ್ಪಡೆಗೊಂಡ ಹಲವರನ್ನ ಸ್ವಾಗತಿಸಿ ಬರಮಾಡಿಕೊಂಡರು.
ಈ ಸಂದರ್ಭ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ ಶಶಿಧರ್, ನೆಲ್ಯಹುದಿಕೇರಿ ವಲಯ ಕಾಂಗ್ರೆಸ್ ಅಧ್ಯಕ್ಷ ಸಾಬು ವರ್ಗೀಸ್, ಕಾರ್ಯಾಧ್ಯಕ್ಷ ಹನೀಫ, ಗ್ರಾ.ಪಂ ಅಧ್ಯಕ್ಷ ಎ.ಕೆ ಹಕೀಂ, ಜಿಲ್ಲಾ ಕಾಂಗ್ರೆಸ್ ಸಮಿತಿ ಸದಸ್ಯ ಕೆ. ಎಂ ಬಶೀರ್, ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಮುಖರಾದ ಜೋಸೆಫ್ ಶ್ಯಾಮ್ , ಜಿ.ಪಂ ಮಾಜಿ ಸದಸ್ಯೆ ಸುನಿತಾ ಮಂಜುನಾಥ್, ಯುವ ಕಾಂಗ್ರೆಸ್ ಅಧ್ಯಕ್ಷ ಸಿಯಾಬ್ ಸೇರಿದಂತೆ ಮತ್ತಿತರರು ಹಾಜರಿದ್ದರು.









