ಸಿದ್ದಾಪುರ ಏ.15 : ಮಾಲ್ದಾರೆ ಜನಪರ ಕ್ರೀಡಾ ಮತ್ತು ಕಲಾ ಯುವಜನ ಸಂಘದ ಆಶ್ರಯದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 132ನೇ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು.
ಸಂಘದ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಸಾಮಾಜಿಕ ಹೋರಾಟಗಾರ ಪ್ರಭಾಕರ್ ದೀಪ ಬೆಳಗಿ ಪುಷ್ಪ ನಮನ ಸಲ್ಲಿಸಿದರು.
ನಂತರ ಮಾತನಾಡಿದ ಅವರು, ಬಾಬಾ ಸಾಹೇಬ್ ಅವರ ಚಿಂತನೆಗಳು, ಬರಹಗಳನ್ನು ಪ್ರತಿಯೊಬ್ಬರೂ ಅಧ್ಯಯನ ಮಾಡಬೇಕು ಹಾಗೂ ಅವರು ಬರೆದಿರುವ ಸಂವಿಧಾನದ ಆಶಯವನ್ನು ತಿಳಿದುಕೊಳ್ಳುವಂತಾಗಬೇಕು. ಭಾರತದ ಸಂವಿಧಾನದ ಮೂಲಕ ಧ್ವನಿ ಇಲ್ಲದವರಿಗೆ ಧ್ವನಿಯಾಗಿ ಸಂವಿಧಾನ ನೀಡಿದ್ದಾರೆ. ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಭಾವ ಮಾಲ್ದಾರೆ, ಉಪಾಧ್ಯಕ್ಷ ರಾಜ, ಕಾರ್ಯದರ್ಶಿ ಆಂಟೋನಿ, ಪುನೀತ್, ಶಾಫಿಕ್, ಜುನೈದ್,ಸಂತೋಷ್, ಮುಂತಾದವರು ಹಾಜರಿದ್ದರು.








