ನಾಪೋಕ್ಲು ಏ.15 : ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳು ಹೆಚ್ಚು ಪ್ರಯತ್ನ ಮಾಡಿದರೆ ಮುಂದಿನ ಗುರಿಯನ್ನು ಮುಟ್ಟಲು ಸಾಧ್ಯ ಎಂದು ನಬಾರ್ಡ್ ಜಿಲ್ಲಾ ಅಭಿವೃದ್ಧಿ ಅಧಿಕಾರಿ ರಮೇಶ್ ಬಾಬು .ವಿ ಹೇಳಿದರು.
ಅಂಕುರ್ ಪಬ್ಲಿಕ್ ಶಾಲೆಯಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಏರ್ಪಡಿಸಲಾಗಿದ್ದ ಗ್ರಾಜುಯೇಷನ್ ಡೇ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳು ನಿಗದಿತ ಗುರಿಯನ್ನು ಸಾಧಿಸಲು ಪೋಷಕರ ಮತ್ತು ಶಿಕ್ಷಕರ ಪ್ರೋತ್ಸಾಹ ಬಹಳ ಮುಖ್ಯ ಎಂದರು.
ಸಮಾರಂಭದ ಅಧ್ಯಕ್ಷತೆಯನ್ನು ರಾಜಾ ಚರ್ಮಣ ವಹಿಸಿದ್ದರು. ಶಾಲೆಯ ಆಡಳಿತ ಮಂಡಳಿ ಕಾರ್ಯದರ್ಶಿ ರತ್ನ ಚರ್ಮಣ ಪೋಷಕರನ್ನು ಮತ್ತು ಮಕ್ಕಳನ್ನು ಉದ್ದೇಶಿಸಿ ಮಾತನಾಡಿದರು. ಸಮಾರಂಭದಲ್ಲಿ ಟ್ರಸ್ಟಿ ಯಾದ ಗಾಯನ್ ಗೌರಮ್ಮ ಹಾಗೂ ಶಿಕ್ಷಕ ವೃಂದ ವಿದ್ಯಾರ್ಥಿಗಳು ಪೋಷಕರು ಹಾಜರಿದ್ದರು.
ಈ ಸಂದರ್ಭ ಉಪಸ್ಥಿತ ಇದ್ದ ಗಣ್ಯರು ವಿದ್ಯಾರ್ಥಿಗಳಿಗೆ ಅರ್ಹತಾ ಪತ್ರ ಹಾಗೂ ನೆನಪಿನ ಕಾಣಿಕೆ ನೀಡಿ ಗೌರವಿಸಿ ಶುಭ ಕೋರಿದರು.
ವರದಿ : ದುಗ್ಗಳ ಸದಾನಂದ









