ಮಡಿಕೇರಿ.ಏ.15 : ಕೊಡಗು ಪತ್ರಕರ್ತರ ಸಂಘದ ವಾರ್ಷಿಕೋತ್ಸವದ ಅಂಗವಾಗಿ ಏ.16 ರಂದು ಮಡಿಕೇರಿ ಪತ್ರಿಕಾಭವನದಲ್ಲಿ ಪತ್ರಕರ್ತರಿಗಾಗಿ ಬೆಳಿಗ್ಗೆ 9 ಗಂಟೆಯಿಂದ ಒಳಾಂಗಣ ಕ್ರೀಡಾಕೂಟವನ್ನು ಹಮ್ಮಿಕೊಳ್ಳಲಾಗಿದೆ.
ಕ್ರೀಡಾಕೂಟದ ಉದ್ಘಾಟನೆಯನ್ನು ಹಿರಿಯ ವಕೀಲ ಡಾ.ಯಾಲದಾಳು ಮನೋಜ್ ಬೋಪಯ್ಯ ನೆರವೇರಿಸಲಿದ್ದಾರೆ.
ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಎಸ್.ಎ.ಮುರಳೀಧರ್ ವಹಿಸಲಿದ್ದು, ಅತಿಥಿಯಾಗಿ ಸಂಘದ ಉಪಾಧ್ಯಕ್ಷ ಹಾಗೂ ಕ್ರೀಡಾಕೂಟದ ಸಂಚಾಲಕರಾದ ಜಿ.ವಿ.ರವಿಕುಮಾರ್ ಪಾಲ್ಗೊಳ್ಳಲಿದ್ದಾರೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಉಜ್ವಲ್ ರಂಜಿತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.









