ಮಡಿಕೇರಿ ಏ.15 : ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾದ ಎ.ಎಸ್ ಪೊನ್ನಣ್ಣ ಹಾಗೂ ಡಾ.ಮಂತರ್ ಗೌಡ ಅವರ ಬಿ ಫಾರ್ಮ್ ಅನ್ನು, ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಅವರು ಅಭ್ಯರ್ಥಿಗಳ ಪರವಾಗಿ ಇಂದು ಕೆಪಿಸಿಸಿ ಅಧ್ಯಕ್ಷರ ಬಳಿಯಿಂದ ಪಡೆದುಕೊಂಡರು.
ಈ ಸಂದರ್ಭ ಜಿಲ್ಲಾಧ್ಯಕ್ಷ ಹಾಗೂ ಪಕ್ಷದ ಪ್ರಮುಖ ಹರಪಳ್ಳಿ ರವೀಂದ್ರ ರಾಜ್ಯಾಧ್ಯಕ್ಷರೊಂದಿಗೆ ಕೊಡಗು ಜಿಲ್ಲೆ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚಿಸಿದರು. ಹಿಂದುಳಿದ ಘಟಕದ ಜಿಲ್ಲಾಧ್ಯಕ್ಷ ಬಾನಂಡ ಪ್ರಥ್ಯು ಉಪಸ್ಥಿತರಿದ್ದರು.











