ಮಡಿಕೇರಿ ಏ.15 : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಸಮೂದಾಯ ವೈದ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ರಾಮಚಂದ್ರ ಕಾಮತ್ ಮತ್ತು ಸಹ-ಪ್ರಾಧ್ಯಾಪಕರಾದ ಡಾ.ಶರವಣನ್ ಅವರು ಇಂಡಿಯನ್ ಪಬ್ಲಿಕ್ ಹೆಲ್ತ್ ಅಸೋಸಿಯೇಷನ್ ವತಿಯಿಂದ ನೀಡಲ್ಪಡುವ ಡಾ.ಬಿ.ಎನ್.ರಾಯ್ ಅತ್ಯುತ್ತಮ ಸಂಶೋಧನ ಪ್ರಶಸ್ತಿಗೆ ಆಯ್ಕೆಯಾಗಿರುತ್ತಾರೆ.
ಉಡುಪಿ ಜಿಲ್ಲೆಯ ಪಡುಬಿದ್ರೆಯ ಉಷ್ಣ ವಿದ್ಯುತ್ ಸ್ಥಾವರದಿಂದ ಜನರ ಆರೋಗ್ಯ ಹಾಗೂ ಪರಿಸರದ ಮೇಲಿನ ಪರಿಣಾಮಗಳ ಕುರಿತ ಸಂಶೋಧನೆಗೆ ಈ ಪ್ರಶಸ್ತಿ ಲಭಿಸಿದೆ. ಕೋಲ್ಕತದಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪಶ್ಚಿಮ ಬಂಗಾಳದ ರಾಜ್ಯಪಾಲ ಡಾ.ಸಿ.ವಿ.ಆನಂದ್ ಭೋಸ್ ಅವರಿಂದ ಡಾ.ರಾಮಚಂದ್ರ ಕಾಮತ್ ಅವರು ಪ್ರಶಸ್ತಿಯನ್ನು ಸ್ವೀಕರಿಸಿದರು. ಇಂಡಿಯನ್ ಪಬ್ಲಿಕ್ ಹೆಲ್ತ್ ಅಸೋಸಿಯೇಷನ್ ಅಧ್ಯಕ್ಷ ಡಾ.ಸಂಘಮಿತ್ರ ಘೋಷ್ ಅವರು ಉಪಸ್ಥಿತರಿದ್ದರು ಎಂದು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕರು ತಿಳಿಸಿದ್ದಾರೆ.









