ಮಡಿಕೇರಿ ಏ.16 : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಜಾತ್ಯತೀತ ಜನತಾದಳದ ಅಭ್ಯರ್ಥಿಯಾಗಿ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ನಾಪೋಕ್ಲುವಿನ ಎಂ.ಎ.ಮನ್ಸೂರ್ ಆಲಿ ಆಯ್ಕೆಯಾಗಿದ್ದಾರೆ.
ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಂದ ಇಂದು “ಬಿ” ಫಾರಂ ಪಡೆದುಕೊಂಡಿರುವ ಮನ್ಸೂರ್ ಆಲಿ ಏ.19 ರಂದು ನಾಮಪತ್ರ ಸಲ್ಲಿಸಲಿದ್ದಾರೆ.
ಎರಡು ರಾಷ್ಟ್ರೀಯ ಪಕ್ಷಗಳಿಂದ ಬೇಸತ್ತಿರುವ ಜನ ಈ ಬಾರಿ ಜೆಡಿಎಸ್ ನ್ನು ಬೆಂಬಲಿಸಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.










