ಮಡಿಕೇರಿ ಏ.16 : ವಿಧಾನಸಭಾ ಚುನಾವಣೆ ಸಂಬoಧ ಯಾವುದೇ ರೀತಿಯ ಗೊಂದಲಗಳಿಗೆ ಅವಕಾಶ ಮಾಡದೆ ವ್ಯವಸ್ಥಿತವಾಗಿ ಚುನಾವಣಾ ಕಾರ್ಯ ನಿರ್ವಹಿಸುವಂತೆ ಮತಗಟ್ಟೆ ಅಧಿಕಾರಿಗಳು ಮತ್ತು ಸಹಾಯಕ ಮತಗಟ್ಟೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಬಿ.ಸಿ.ಸತೀಶ ಅವರು ನಿರ್ದೇಶನ ನೀಡಿದ್ದಾರೆ.
ನಗರದ ಸಂತ ಜೋಸೆಫರ ಕಾಲೇಜಿನಲ್ಲಿ ಪಿಆರ್‌ಒ ಮತ್ತು ಎಪಿಆರ್‌ಗಳಿಗೆ ಭಾನುವಾರ ನಡೆದ ಚುನಾವಣಾ ತರಬೇತಿ ಕಾರ್ಯಗಾರದಲ್ಲಿ ಪಾಲ್ಗೊಂಡು ಜಿಲ್ಲಾಧಿಕಾರಿ ಅವರು ಮಾತನಾಡಿದರು.
ಚುನಾವಣಾ ಕಾರ್ಯವನ್ನು ಶ್ರದ್ಧೆಯಿಂದ ನಿರ್ವಹಿಸಬೇಕು. ಯಾವುದೇ ರೀತಿಯ ಆತಂಕ ಅಥವಾ ಭಯ ಪಡಬಾರದು, ಚುನಾವಣಾ ಆಯೋಗದ ನಿರ್ದೇಶನದಂತೆ ವಿದ್ಯುನ್ಮಾನ ಮತಯಂತ್ರ, ವಿವಿಪ್ಯಾಟ್ ಮತ್ತಿತರ ಬಗ್ಗೆ ಮಾಹಿತಿ ಪಡೆದು ವ್ಯವಸ್ಥಿತವಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಸೂಚಿಸಿದರು.
ಜಿಲ್ಲೆಯಲ್ಲಿ ಒಟ್ಟು 542 ಮತಗಟ್ಟೆಗಳಿದ್ದು, ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ 269 ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ 273 ಮತಗಟ್ಟೆಗಳಿದ್ದು, ಮತಗಟ್ಟೆಗಳಿಗೆ ನಿಯೋಜಿಸುವ ಮತಗಟ್ಟೆ ಅಧಿಕಾರಿಗಳು ಮತ್ತು ಸಹಾಯಕ ಮತಗಟ್ಟೆ ಅಧಿಕಾರಿಗಳಿಗೆ ಚುನಾವಣಾ ತರಬೇತಿ ನೀಡಲಾಗುತ್ತಿದೆ ಎಂದರು.
ಚುನಾವಣೆಗೆ ನಿಯೋಜಿಸಿರುವ ಎಲ್ಲಾ ಹಂತದ ಅಧಿಕಾರಿಗಳಿಗೆ ಅಂಚೆ ಮತದಾನಕ್ಕೆ ಅವಕಾಶವಿದ್ದು, ನಮೂನೆಯನ್ನು ವಿತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಹೇಳಿದರು.
ಚುನಾವಣೆ ಸಂಬAಧ ವಿದ್ಯುನ್ಮಾನ ಮತಯಂತ್ರ ಹಾಗೂ ವಿವಿಪ್ಯಾಟ್ ನಿರ್ವಹಣೆ ಬಗ್ಗೆ ತರಬೇತಿ ಕಾರ್ಯಗಾರದಲ್ಲಿ ಪಿಆರ್‌ಒ, ಎಪಿಆರ್‌ಒ ಹಾಗೂ ಸೆಕ್ಟರ್ ಅಧಿಕಾರಿಗಳಿಂದ ಹಲವು ಮಾಹಿತಿ ಪಡೆದರು.
ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುoಡೇಗೌಡ ಅವರು ಮಾತನಾಡಿ ವಿಧಾನಸಭಾ ಚುನಾವಣೆಗೆ ನಿಯೋಜನೆ ಆಗಿರುವ ಮತಗಟ್ಟೆ ಅಧಿಕಾರಿಗಳು ಹಾಗೂ ಸಹಾಯಕ ಮತಗಟ್ಟೆ ಅಧಿಕಾರಿಗಳು ತಮ್ಮ ಜವಬ್ದಾರಿಯನ್ನು ತಿಳಿದು ಕರ್ತವ್ಯ ನಿರ್ವಹಿಸಬೇಕು. ಸಂಶಯ ಇದ್ದಲ್ಲಿ ಸೆಕ್ಟರ್ ಅಧಿಕಾರಿಗಳ ಗಮನಕ್ಕೆ ತಂದು ಪರಿಹರಿಸಿಕೊಳ್ಳಬೇಕು ಎಂದರು.
‘ಮಾಸ್ಟರ್ ತರಬೇತಿದಾರರಾದ ಕೆ.ಜೆ.ದಿವಾಕರ ಅವರು ಚುನಾವಣಾ ಕರ್ತವ್ಯ ಎಂದರೆ ಕೆಲವರು ಹಿಂಜರಿಕೆ ಪಡುತ್ತಾರೆ. ಆದರೆ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಚುನಾವಣಾ ಕರ್ತವ್ಯವನ್ನು ಹಬ್ಬದ ರೀತಿ ಶ್ರದ್ಧೆಯಿಂದ ನಿರ್ವಹಿಸಬೇಕು ಎಂದು ಅವರು ತಿಳಿಸಿದರು.’
ಚುನಾವಣಾ ಆಯೋಗ ನೀಡಿರುವ ಮರ್ಗಸೂಚಿಗಳನ್ನು ಸರಿಯಾಗಿ ಅರ್ಥಮಾಡಿಕೊಂಡರೆ ಯಾವುದೇ ಗೊಂದಲಗಳಿಗೆ ಅವಕಾಶ ಆಗುವುದಿಲ್ಲ, ಆ ನಿಟ್ಟಿನಲ್ಲಿ ಆತ್ಮವಿಶ್ವಾಸ ಇರಬೇಕು, ಆದರೆ ಅತಿಯಾದ ಆತ್ಮವಿಶ್ವಾಸವೂ ಬೇಡ ಎಂದು ದಿವಾಕರ ಅವರು ನುಡಿದರು.’
ವಿದ್ಯುನ್ಮಾನ ಮತಯಂತ್ರಗಳ ನಿರ್ವಹಣೆ, ಅಣಕು ಮತದಾನ ಮತ್ತಿತರ ಸಂಬAಧ ಮತಗಟ್ಟೆ ಅಧಿಕಾರಿಗಳು ಜಾಗೃತಿ ವಹಿಸಬೇಕು. ಚುನಾವಣಾ ಪಾವಿತ್ರö್ಯತೆ ಕಾಪಾಡಬೇಕು ಎಂದು ಕೆ.ಜೆ.ದಿವಾಕರ ಅವರು ಹೇಳಿದರು.
‘ಪ್ರತಿ ಮತಗಟ್ಟೆಯಲ್ಲಿ ಮತಗಟ್ಟೆ ಅಧ್ಯಕ್ಷಾಧಿಕಾರಿ, ಸಹಾಯಕ ಮತಗಟ್ಟೆ ಅಧ್ಯಕ್ಷಾಧಿಕಾರಿ, ಎರಡನೇ ಮತಗಟ್ಟೆ ಅಧಿಕಾರಿ ಮತ್ತು ಮೂರನೇ ಮತಗಟ್ಟೆ ಅಧಿಕಾರಿ ಕರ್ತವ್ಯ ನಿರ್ವಹಿಸಲಿದ್ದಾರೆ ಎಂದರು.’
ಮಸ್ಟರಿಂಗ್, ಮತದಾನದಂದು ಮತ್ತು ಮತದಾನ ಪೂರ್ಣಗೊಂಡ ನಂತರ ಡಿಮಸ್ಟರಿಂಗ್ ಕಾರ್ಯನಿರ್ವಹಣೆ ಸಂಬAಧಿಸಿದAತೆ ಹಲವು ಮಾಹಿತಿ ನೀಡಿದರು.
ಮತ್ತೊಬ್ಬ ಮಾಸ್ಟರ್ ತರಬೇತಿದಾರರಾದ ಕೆ.ಸಿ.ದಯಾನಂದ ಅವರು ಚುನಾವಣಾ ಕಾರ್ಯಕ್ಕೆ ನಿಯೋಜನೆಗೊಂಡ ಪ್ರತಿಯೊಬ್ಬ ಅಧಿಕಾರಿ, ಸಿಬ್ಬಂದಿ, ಏಜೆಂಟ್ ಅವರು ಚುನಾವಣೆ ಸಂಬAಧ ಆಯೋಗದ ನಿರ್ದೇಶನ ಪಾಲಿಸಬೇಕು ಎಂದರು.
ಮತಗಟ್ಟೆ ಅಧಿಕಾರಿಗಳು ಅಣಕು ಮತದಾನ, ಪ್ರಮಾಣ ಪತ್ರ ಬರೆಯುವುದು, ಇವಿಎಂ, ಕಂಟ್ರೊಲ್ ಯುನಿಟ್, ಬ್ಯಾಲೆಟ್ ಯುನಿಟ್ ಹಾಗೂ ವಿವಿಪ್ಯಾಟ್ ಬಗ್ಗೆ ಸ್ಪಷ್ಟವಾಗಿ ತಿಳಿದುಕೊಂಡಿರಬೇಕು. ಮತದಾನದ ಗೌಪ್ಯತೆಯನ್ನು ಕಾಪಾಡಬೇಕು ಎಂದು ತಿಳಿಸಿದರು.
ತಹಶೀಲ್ದಾರರಾದ ಕಿರಣ್ ಜಿ.ಗೌರಯ್ಯ, ಎಸ್.ಎನ್.ನರಗುಂದ, ಟಿ.ಎಂ.ಪ್ರಕಾಶ್, ಚುನಾವಣಾ ತಹಶೀಲ್ದಾರ್ ರವಿಕುಮಾರ್, ಶಾಲ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಾದ ರಂಗಧಾಮಯ್ಯ, ಸೆಕ್ಟರ್ ಅಧಿಕಾರಿಗಳು, ಪಿಆರ್‌ಒ, ಎಪಿಆರ್‌ಒ, ಇತರರು ಇದ್ದರು.
Breaking News
- *ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆ : ಮಾ.11ಕ್ಕೆ ವಿಚಾರಣೆ ಮುಂದೂಡಿಕೆ*
- *ಜ.25 ರಂದು ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮ*
- *ಜ.30 ರಂದು ಹುತಾತ್ಮರ ದಿನಾಚರಣೆ : ಮಡಿಕೇರಿಯಲ್ಲಿ ಪೂರ್ವಭಾವಿ ಸಭೆ*
- *ಹೈದರಾಬಾದ್ನಲ್ಲಿ ಗಮನ ಸೆಳೆದ ಕುಡಿಯರ ಉರುಟಿಕೊಟ್ಟ್ ಪಾಟ್ ನೃತ್ಯ*
- *ಮಡಿಕೇರಿ : ಜ.28 ರಂದು ಕುಂದುರುಮೊಟ್ಟೆ ದಸರಾ ಉತ್ಸವ ಸಮಿತಿಯ ಸುವರ್ಣ ಮಹೋತ್ಸವ ಸ್ಮರಣ ಸಂಚಿಕೆ “ದಶಮಿ” ಬಿಡುಗಡೆ*
- *ಮಡಿಕೇರಿಯ ಡಾ.ಅಂಬೇಡ್ಕರ್ ಭವನವನ್ನು ದಲಿತ ಸಂಘರ್ಷ ಸಮಿತಿಯ ವಶಕ್ಕೆ ನೀಡಿ*
- *‘ಸಂವಿಧಾನ್ ಸಮ್ಮಾನ್ ಅಭಿಯಾನ್’ : ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಸಂವಿಧಾನ ವಿರೋಧಿಯಾಗಿ ನಡೆದುಕೊಂಡವರ ಬಣ್ಣ ಬಯಲು*
- *ಅಂತರರಾಷ್ಟ್ರೀಯ ವಾಣಿಜ್ಯ ಮೇಳ ಸಾವಯವ ಮತ್ತು ಸಿರಿಧಾನ್ಯ ಕಾರ್ಯಕ್ರಮ ಉದ್ಘಾಟನೆ : ಮಂಡ್ಯದಲ್ಲಿ ಸಂಯೋಜಿತ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆ : ಮುಖ್ಯಮಂತ್ರಿ ಸಿದ್ದರಾಮಯ್ಯ
- *ಭಾಗಮಂಡಲದಲ್ಲಿ ಕಸಾಪ ದತ್ತಿ ಉಪನ್ಯಾಸ ಕಾರ್ಯಕ್ರಮ : ಗೌರವ ಸಮರ್ಪಣೆ*
- *ಬಲ್ಲಮಾವಟಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ : ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ : ಡಾ.ಶೈಲಜಾ ಸಲಹೆ*