ಮಡಿಕೇರಿ ಏ.16 : ಮಾದಕ ವಸ್ತುಗಳಾದ ಚರಸ್ ಹಾಗೂ ಗಾಂಜಾ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಭೇದಿಸಿರುವ ವಿರಾಜಪೇಟೆ ಅಬಕಾರಿ ಇಲಾಖೆ ಸಿಬ್ಬಂದಿಗಳು ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಪೊನ್ನಂಪೇಟೆ ತಾಲ್ಲೂಕಿನ ಕಾರ್ಮಾಡು ಚೆಕ್ ಪೋಸ್ಟ್ ನಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಅಬಕಾರಿ ಇಲಾಖೆ ಸಿಬ್ಬಂದಿಗಳು ಕಾರೊಂದನ್ನು ತಪಾಸಣೆ ನಡೆಸಿದಾಗ ಮಾದಕ ವಸ್ತುಗಳು ಪತ್ತೆಯಾಗಿದೆ. ಅಲ್ಲದೆ ಗಾಂಜಾ ಸೇವನೆ ಮಾಡಿರುವುದು ಕಂಡು ಬಂದಿದೆ. ತಕ್ಷಣ ಕಾರ್ಯಪ್ರವೃತ್ತರಾದ ಸಿಬ್ಬಂದಿಗಳು 10 ಗ್ರಾಂ ಚರಸ್, 35 ಗ್ರಾಂ ಗಾಂಜಾ, ಕಾರು ಸಹಿತ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡರು.
ಆರೋಪಿಗಳಾದ ತಮಪ್ಪ ಸರ್ಕಾರ್, ಬೀಬವ್, ದೇವಾಂಸ್ ಶರ್ಮಾ ಹಾಗೂ ಆದಿತ್ಯ ಕುಮಾರ್ ಅವರುಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ವಿರಾಜಪೇಟೆ ಉಪ ವಿಭಾಗ ಕಛೇರಿಯ ಅಬಕಾರಿ ಉಪ ಅಧೀಕ್ಷಕ ಎಂ.ಎನ್.ನಟರಾಜು, ಸಿಬ್ಬಂದಿಗಳಾದ ಎನ್.ಜಿ.ಮದನ್ ಕುಮಾರ್, ಸಂತೋಷ್, ಚಾಲಕ ದರ್ಶನ್ ಪೊಲೀಸ್ ಸಿಬ್ಬಂದಿ ಸಂತೋಷ್ ಕುಮಾರ್, ಅರಣ್ಯ ಇಲಾಖಾ ಸಿಬ್ಬಂದಿ ಉದಯಕುಮಾರ್ ಮತ್ತಿತರ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
Breaking News
- *ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆ : ಮಾ.11ಕ್ಕೆ ವಿಚಾರಣೆ ಮುಂದೂಡಿಕೆ*
- *ಜ.25 ರಂದು ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮ*
- *ಜ.30 ರಂದು ಹುತಾತ್ಮರ ದಿನಾಚರಣೆ : ಮಡಿಕೇರಿಯಲ್ಲಿ ಪೂರ್ವಭಾವಿ ಸಭೆ*
- *ಹೈದರಾಬಾದ್ನಲ್ಲಿ ಗಮನ ಸೆಳೆದ ಕುಡಿಯರ ಉರುಟಿಕೊಟ್ಟ್ ಪಾಟ್ ನೃತ್ಯ*
- *ಮಡಿಕೇರಿ : ಜ.28 ರಂದು ಕುಂದುರುಮೊಟ್ಟೆ ದಸರಾ ಉತ್ಸವ ಸಮಿತಿಯ ಸುವರ್ಣ ಮಹೋತ್ಸವ ಸ್ಮರಣ ಸಂಚಿಕೆ “ದಶಮಿ” ಬಿಡುಗಡೆ*
- *ಮಡಿಕೇರಿಯ ಡಾ.ಅಂಬೇಡ್ಕರ್ ಭವನವನ್ನು ದಲಿತ ಸಂಘರ್ಷ ಸಮಿತಿಯ ವಶಕ್ಕೆ ನೀಡಿ*
- *‘ಸಂವಿಧಾನ್ ಸಮ್ಮಾನ್ ಅಭಿಯಾನ್’ : ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಸಂವಿಧಾನ ವಿರೋಧಿಯಾಗಿ ನಡೆದುಕೊಂಡವರ ಬಣ್ಣ ಬಯಲು*
- *ಅಂತರರಾಷ್ಟ್ರೀಯ ವಾಣಿಜ್ಯ ಮೇಳ ಸಾವಯವ ಮತ್ತು ಸಿರಿಧಾನ್ಯ ಕಾರ್ಯಕ್ರಮ ಉದ್ಘಾಟನೆ : ಮಂಡ್ಯದಲ್ಲಿ ಸಂಯೋಜಿತ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆ : ಮುಖ್ಯಮಂತ್ರಿ ಸಿದ್ದರಾಮಯ್ಯ
- *ಭಾಗಮಂಡಲದಲ್ಲಿ ಕಸಾಪ ದತ್ತಿ ಉಪನ್ಯಾಸ ಕಾರ್ಯಕ್ರಮ : ಗೌರವ ಸಮರ್ಪಣೆ*
- *ಬಲ್ಲಮಾವಟಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ : ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ : ಡಾ.ಶೈಲಜಾ ಸಲಹೆ*