ಮಡಿಕೇರಿ ಏ.16 : ರಾಷ್ಟ್ರದ ಪ್ರಗತಿಯಲ್ಲಿ ಮಾಧ್ಯಮ ಕ್ಷೇತ್ರದ ಪಾತ್ರ ಅತ್ಯಂತ ಮಹತ್ವದ್ದು ಮತ್ತು ಜವಾಬ್ದಾರಿಯುತವಾದುದು ಎಂದು ವಕೀಲರಾದ ಡಾ.ಯಾಲದಾಳು ಮನೋಜ್ ಬೋಪಯ್ಯ ಅಭಿಪ್ರಾಯಪಟ್ಟರು.
ನಗರದ ಪತ್ರಿಕಾಭವನದಲ್ಲಿಂದು ಕೊಡಗು ಪತ್ರಕರ್ತರ ಸಂಘದ ಪ್ರಥಮ ವಾರ್ಷಿಕೋತ್ಸವದ ಪ್ರಯುಕ್ತ ನಡೆದ ಒಳಾಂಗಣ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ 4ನೇ ಅಂಗವಾಗಿ ಪರಿಗಣಿತವಾಗಿರುವ ಮಾಧ್ಯಮ ಕ್ಷೇತ್ರ ಸಮಾಜದ ಭಾವನೆಗಳಿಗೆ ಸದಾ ಸ್ಪಂದಿಸುವ ಅತ್ಯಂತ ಸೂಕ್ಷ್ಮವಾದ ಕ್ಷೇತ್ರವೆಂದರು.
ರಾಷ್ಟçವನ್ನು ಕಟ್ಟುವ ಮತ್ತು ಬೆಳೆೆಸುವ ಮಹತ್ತರ ಜವಾಬ್ದಾರಿ ಮಾಧ್ಯಮ ಕ್ಷೇತ್ರದ ಮೇಲಿದೆಯೆಂದು ತಿಳಿಸಿದ ಅವರು, ಕೊಡಗಿನ ಮಾಧ್ಯಮಗಳು ಅತ್ಯಂತ ಪ್ರಾಮಾಣಿಕವಾದ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿವೆಯೆಂದು ಮೆಚ್ಚುಗೆಯ ನುಡಿಗಳನ್ನಾಡಿದರು.
ಪತ್ರಕರ್ತರು ತಮ್ಮ ದೈನಂದಿನ ಬಿಡುವಿಲ್ಲದ ಕೆಲಸ ಕಾರ್ಯಗಳ ಒತ್ತಡಗಳಿಂದ ಮುಕ್ತರಾಗಿ ಮತ್ತೆ ಉತ್ಸಾಹ ಮತ್ತು ಕ್ರಿಯಾಶೀಲತೆಯಿಂದ ಕಾರ್ಯನಿರ್ವಹಿಸಲು ಕ್ರೀಡಾ ಚಟುವಟಿಕೆಗಳು ಸಹಾಯಕವಾಗಿದೆಯೆಂದು ಡಾ. ಮನೋಜ್ ಬೋಪಯ್ಯ ಹೇಳಿದರು.
ಪತ್ರಕರ್ತರು ತಮ್ಮ ವೃತ್ತಿ ಧರ್ಮವನ್ನು ಕಾಪಾಡಿಕೊಳ್ಳುವ ಮೂಲಕ ಪತ್ರಿಕೋದ್ಯಮಕ್ಕೆ ಗೌರವ, ಘನತೆಯನ್ನು ತರಬೇಕು ಎಂದು ಕಿವಿ ಮಾತು ಹೇಳಿದ ಅವರು, ಇಂದಿನ ವಿವಿಧ ಸಾಮಾಜಿಕ ಜಾಲತಾಣಗಳ ಪೈಪೋಟಿಗಳ ನಡುವೆ ಪತ್ರಕರ್ತರು ಪ್ರತಿಕ್ಷಣವೂ ಸದಾ ಕೆಲಸ ಕಾರ್ಯಗಳ ಒತ್ತಡಗಳಲ್ಲಿ ಮುಳುಗಿರುತ್ತಾರೆ. ಇಂತಹ ಸಂದಿಗ್ದ ಸಂದರ್ಭದಲ್ಲಿ ಪತ್ರಕರ್ತರು ಕ್ರೀಡಾಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕೆಂದರು.
ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಮುರುಳೀಧರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಪತ್ರಕರ್ತರು ಕ್ರೀಡಾ ಚಟುವಟಿಕೆಗಳಲ್ಲಿ ಹೆಚ್ಚು ಹೆಚ್ಚು ತೊಡಗಿಸಿಕೊಳ್ಳುವುದರಿಂದ ತಮ್ಮ ದೈನಂದಿನ ಒತ್ತಡಗಳಿಂದ ಪಾರಾಗಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯ ಪಟ್ಟರು.
ಸಂಘದ ಉಪಾಧ್ಯಕ್ಷ ಜಿ.ವಿ.ರವಿಕುಮಾರ್ ಮಾತನಾಡಿ, ಕೊಡಗು ಪತ್ರಕರ್ತರ ಸಂಘದ ಪ್ರಥಮ ವಾರ್ಷಿಕೋತ್ಸವ ಪ್ರಯುಕ್ತ ಒಳಾಂಗಣ ಕ್ರೀಡಾಕೂಟವಲ್ಲದೆ, ಮುಂದಿನ ದಿನಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದಾಗಿ ತಿಳಿಸಿದರು.
ಮೌಲ್ಯ ಬಜೆಕೋಡಿ ಪ್ರಾರ್ಥಿಸಿ, ಸಂಘದ ಪ್ರಧಾನ ಕಾರ್ಯದರ್ಶಿ ಉಜ್ವಲ್ ರಂಜಿತ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಕ್ರೀಡಾಕೂಟ- ಸಭಾ ಕಾರ್ಯಕ್ರಮದ ಬಳಿಕ ಜಿಲ್ಲೆಯ ವಿವಿಧೆಡೆಗಳಿಂದ ಆಗಮಿಸಿದ್ದ ಪತ್ರಕರ್ತರು ಟೇಬಲ್ ಟೆನ್ನಿಸ್, ಕೇರಂ, ಚೆಸ್ ಇತ್ಯಾದಿ ಸ್ಪರ್ಧೆಗಳಲ್ಲಿ ಪಾಲ್ಗೊಂಡರು.
Breaking News
- *ದಕ್ಷಿಣ ಕೊಡಗಿನಲ್ಲಿ ಸಣ್ಣ ಕೈಗಾರಿಕಾ ಪ್ರದೇಶಾಭಿವೃದ್ಧಿ : 50 ಏಕರೆ ಭೂಮಿ ಮಂಜೂರಾತಿಗೆ ಆಪ್ ಮನವಿ*
- *ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜು : 8ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ*
- *ರಾಷ್ಟ್ರೀಯ ಜೂನಿಯರ್ ಹಾಕಿ ತಂಡಕ್ಕೆ ಕೊಡಗಿನ ವಿಶ್ವಜಿತ್ ಹಾಗೂ ಪೂಜಿತ್ ಆಯ್ಕೆ*
- *ರಾಷ್ಟ್ರೀಯ ಜೂನಿಯರ್ ಹಾಕಿ ತಂಡಕ್ಕೆ ದೃಶ್ಯ ಅಚ್ಚಪ್ಪ ಆಯ್ಕೆ*
- *ಹೆಬ್ಬಾಲೆ : ಜ.23 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
- *ಶ್ರೀ ರಾಮ ಜನ್ಮಭೂಮಿ ಸೇವಾ ಸಮಿತಿಯಿಂದ ಮಡಿಕೇರಿಯಲ್ಲಿ ಅನ್ನದಾನ*
- *ಜ.26 ರಂದು ಲೋಕಾಪ೯ಣೆಯಾಗಲಿದೆ ಮತ್ತೆ ವಸಂತ*
- *ಹೆಗ್ಗಳ ಗ್ರಾಮದ ಸರ್ಕಾರಿ ಶಾಲೆಗೆ ಕಂಪ್ಯೂಟರ್ ಕೊಡುಗೆ*
- *ಎನ್.ಯು.ನಾಚಪ್ಪ ವಿರುದ್ಧ ಪ್ರಕರಣ : ಮಡಿಕೇರಿ ಕೊಡವ ಸಮಾಜ ಖಂಡನೆ*
- *ವಿರಕ್ತ ಮಠದ ಶ್ರೀ ಬಸವಪ್ರಭು ಸ್ವಾಮೀಜಿಗೆ ಪಿ.ಹೆಚ್.ಡಿ ಪದವಿ*