ಮಡಿಕೇರಿ ಏ.17 : ಪೊನ್ನಂಪೇಟೆಯ ಭಾರತೀಯ ಜನತಾ ಪಕ್ಷದ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಚುನಾವಣಾ ಕಚೇರಿಯನ್ನು ಶಾಸಕ ಕೆ.ಜಿ.ಬೋಪಯ್ಯ ಉದ್ಘಾಟಿಸಿದರು.
ನಂತರ ಕೊಡವ ಸಮಾಜದಲ್ಲಿ ನಡೆದ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಜಿ.ಬೋಪಯ್ಯ, ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಮಾಚಿಮಾಡ ರವೀಂದ್ರ, ತಾಲೂಕು ಅಧ್ಯಕ್ಷ ನೆಲ್ಲಿರ ಚಲನ್, ಶಕ್ತಿ ಕೇಂದ್ರದ ಅಧ್ಯಕ್ಷರುಗಳಾದ, ಮುಕುಳಿಯರ ಮಧುಕುಮಾರ್ ಹಾಗೂ ಕೋಟೆರ ಕಿಶನ್, ಗ್ರಾ.ಪಂ ಅಧ್ಯಕ್ಷ ಗಿರಿಜಾ ವೆಂಕಟೇಶ್, ಉಪಾಧ್ಯಕ್ಷ ದಶಮಿ ಉಪಸ್ಥಿತರಿದ್ದರು.
ಇದೇ ಸಂದರ್ಭ ಹಲವರು ಬಿಜೆಪಿಗೆ ಸೇರ್ಪಡೆಗೊಂಡರು. ಪೊನ್ನಂಪೇಟೆಯ ಜೆ. ಡಿ.ಎಸ್ ಪಕ್ಷದ ಹಿರಿಯ ಮುಖಂಡ ಬಲ್ಸೇರಾ ಕಾಂತರಾಜ್ ಅವರು ಜೆಡಿಎಸ್ ತೊರೆದು ಬಿಜೆಪಿಗೆ ಸೇರ್ಪಡೆಗೊಂಡರು. ಈ ಸಂದರ್ಭ ಶಾಸಕ ಕೆ.ಜಿ.ಬೋಪಯ್ಯ ಪಕ್ಷದ ಶಾಲು ಹೊದಿಸಿ ಬರಮಾಡಿಕೊಂಡರು.