ಮಡಿಕೇರಿ ಏ.17 : ಮಡಿಕೇರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಅವರು ಇಂದು ನಾಮಪತ್ರ ಸಲ್ಲಿಸಿದರು.
ಮಡಿಕೇರಿಯಲ್ಲಿ ಪಕ್ಷದ ಪ್ರಮುಖರೊಂದಿಗೆ ಜಿಲ್ಲಾಡಳಿತ ಭವನಕ್ಕೆ ಆಗಮಿಸಿದ ಎಂ.ಪಿ.ಅಪ್ಪಚ್ಚು ರಂಜನ್ , ಕ್ಷೇತ್ರದ ಚುನಾವಣಾಧಿಕಾರಿ ಡಾ.ಯತೀಶ್ ಉಲ್ಲಾಳ್ ಅವರಿಗೆ ನಾಮಪತ್ರ ಸಲ್ಲಿಸಿದರು.
::: ಮೆರವಣಿಗೆ ::: ನಾಮಪತ್ರ ಸಲ್ಲಿಕೆಗೂ ಮುನ್ನ ಅಪ್ಪಚ್ಚು ರಂಜನ್ ಅವರು ನಗರದ ಶ್ರೀ ಚೌಡೇಶ್ವರಿ ದೇವಾಲಯದ ಆವರಣದಿಂದ ಗಾಂಧಿ ಮೈದಾನದವರೆಗೆ ಪಕ್ಷದ ನೂರಾರು ಕಾರ್ಯಕರ್ತರೊಂದಿಗೆ ಬೃಹತ್ ಮೆರವಣಿಗೆ ನಡೆಸಿದರು.