ಚೆಟ್ಟಳ್ಳಿ ಏ.17 : ಚೆಟ್ಟಳ್ಳಿಯ ಶ್ರೀಮಂಗಲ (ಪೊವ್ವೊದಿ ) ಭಗವತಿ ಉತ್ಸವವು ಶ್ರದ್ಧಾಭಕ್ತಿಯಿಂದ ನೆರವೇರಿತು.
ಪಟ್ಟಣಿ ಹಬ್ಬದೊಂದಿಗೆ ಆರಂಭವಾದ ಉತ್ಸವವು ಊರಿನವರ ಸಮ್ಮುಖದಲ್ಲಿ ದುಡಿಕೊಟ್ಟುಹಾಡಿನೊಂದಿಗೆ ದೇವಾಲಯ ತಕ್ಕರಾದ ಮುಳ್ಳಂಡ ಐನ್ ಮನೆಯಿಂದ ಎತ್ತುಪೋರಾಟ ದೊಂದಿಗೆ ದೇವರಭಂಡಾರವನ್ನು ತರಲಾಯಿತು. ನಂತರ ದೇವಿಗೆ ವಿಶೇಷ ಪೂಜೆ ನೆರವೇರಿತು.
ದೊಡ್ದಹಬ್ಬ ದಂದು ದೇವರ ಭಂಡಾರವನ್ನು ದೇವಾಲಯಕ್ಕೆ ತಂದು ವಿಶೇಷ ಪೂಜೆ ಸಲ್ಲಿಸಲಾಯಿತು. ನಂತರ ತೆಂಗಿಕಾಯಿ ಎಳೆಯುವುದು,ತೆಂಗಿನ ಕಾಯಿಗೆ ಗುಂಡು ಹೊಡೆಯುವುದು, ಬೊಳಕ್ ಮರವನ್ನು ತೆಗೆದು ದೇವಾಲಯದ ಗರ್ಭಗುಡಿಯೊಳಗೆ ಇಡಲಾಯಿತು. ದೇವರ ನೆಲೆಯಲ್ಲಿ ಭಕ್ತಾದಿಗಳು ಹರಕೆ ಕಾಣಿಕೆ ಒಪ್ಪಸಿದರು. ಪ್ರಸಾದ ವಿತರಣೆ ನೆರವೇರಲಿತು.
ಬಳಿಕ ದೇವಾಲಯದಲ್ಲಿ ಶುದ್ದ ಕಳಸ ಪೂಜೆ ನೆವೇರಿಸಿ, ಭಂಡಾರವನ್ನು ತಕ್ಕರಾದ ಮುಳ್ಳಂಡ ಐನ್ ಮನೆಯಲ್ಲಿ ಒಪ್ಪಿಸಲಾಯಿತು.
Breaking News
- *ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆ : ಮಾ.11ಕ್ಕೆ ವಿಚಾರಣೆ ಮುಂದೂಡಿಕೆ*
- *ಜ.25 ರಂದು ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮ*
- *ಜ.30 ರಂದು ಹುತಾತ್ಮರ ದಿನಾಚರಣೆ : ಮಡಿಕೇರಿಯಲ್ಲಿ ಪೂರ್ವಭಾವಿ ಸಭೆ*
- *ಹೈದರಾಬಾದ್ನಲ್ಲಿ ಗಮನ ಸೆಳೆದ ಕುಡಿಯರ ಉರುಟಿಕೊಟ್ಟ್ ಪಾಟ್ ನೃತ್ಯ*
- *ಮಡಿಕೇರಿ : ಜ.28 ರಂದು ಕುಂದುರುಮೊಟ್ಟೆ ದಸರಾ ಉತ್ಸವ ಸಮಿತಿಯ ಸುವರ್ಣ ಮಹೋತ್ಸವ ಸ್ಮರಣ ಸಂಚಿಕೆ “ದಶಮಿ” ಬಿಡುಗಡೆ*
- *ಮಡಿಕೇರಿಯ ಡಾ.ಅಂಬೇಡ್ಕರ್ ಭವನವನ್ನು ದಲಿತ ಸಂಘರ್ಷ ಸಮಿತಿಯ ವಶಕ್ಕೆ ನೀಡಿ*
- *‘ಸಂವಿಧಾನ್ ಸಮ್ಮಾನ್ ಅಭಿಯಾನ್’ : ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಸಂವಿಧಾನ ವಿರೋಧಿಯಾಗಿ ನಡೆದುಕೊಂಡವರ ಬಣ್ಣ ಬಯಲು*
- *ಅಂತರರಾಷ್ಟ್ರೀಯ ವಾಣಿಜ್ಯ ಮೇಳ ಸಾವಯವ ಮತ್ತು ಸಿರಿಧಾನ್ಯ ಕಾರ್ಯಕ್ರಮ ಉದ್ಘಾಟನೆ : ಮಂಡ್ಯದಲ್ಲಿ ಸಂಯೋಜಿತ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆ : ಮುಖ್ಯಮಂತ್ರಿ ಸಿದ್ದರಾಮಯ್ಯ
- *ಭಾಗಮಂಡಲದಲ್ಲಿ ಕಸಾಪ ದತ್ತಿ ಉಪನ್ಯಾಸ ಕಾರ್ಯಕ್ರಮ : ಗೌರವ ಸಮರ್ಪಣೆ*
- *ಬಲ್ಲಮಾವಟಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ : ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ : ಡಾ.ಶೈಲಜಾ ಸಲಹೆ*