ಮಡಿಕೇರಿ ಏ.17 : ಮಡಿಕೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಮಂಥರ್ ಗೌಡ ಅವರು ಇಂದು ನಾಮಪತ್ರ ಸಲ್ಲಿಸಿದರು. ಪಕ್ಷದ ಪ್ರಮುಖರೊಂದಿಗೆ ಜಿಲ್ಲಾಡಳಿತ ಭವನಕ್ಕೆ ಆಗಮಿಸಿದ ಮಂಥರ್ ಗೌಡ, ಮಡಿಕೇರಿ ಕ್ಷೇತ್ರದ ಚುನಾವಣಾಧಿಕಾರಿ ಡಾ.ಯತೀಶ್ ಉಲ್ಲಾಳ್ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಕಾಂಗ್ರೆಸ್ ಪ್ರಮುಖರಾದ ಹೆಚ್.ಎಸ್.ಚಂದ್ರಮೌಳಿ, ಲೋಕೇಶ್ ಹಾಗೂ ಮಂಥರ್ ಗೌಡ ಪತ್ನಿ ದಿವ್ಯ ಹಾಜರಿದ್ದರು.
::: ಮೆರವಣಿಗೆ :::
ನಾಮಪತ್ರ ಸಲ್ಲಿಕೆಗೂ ಮೊದಲು ಡಾ.ಮಂಥರ್ ಗೌಡ ಅವರು ತಮ್ಮ ನಿವಾಸದಲ್ಲಿ ಗೋವುಗಳಿಗೆ ಪೂಜೆ ಸಲ್ಲಿಸಿದರು. ನಂತರ ನಗರದ ಶ್ರೀ ಚೌಡೇಶ್ವರಿ ದೇವಾಲಯ ಬಳಿಯಿಂದ ಗಾಂಧಿ ಮೈದಾನದವರೆಗೆ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರೊಂದಿಗೆ ಬೃಹತ್ ಮೆರವಣಿಗೆ ನಡೆಸಿದರು.