ಮಡಿಕೇರಿ ಏ.17 : ವಿಧಾನಸಭೆ ಚುನಾವಣೆ ಹಿನ್ನೆಯಲ್ಲಿ ಸಾರ್ವಜನಿಕರು ನಿಭೀತಿಯಿಂದ ಮತ ಚಲಾಯಿಸುವಂತೆ ಧೈರ್ಯ ತುಂಬುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ವತಿಯಿಂದ ನಗರದಲ್ಲಿ ಪಥ ಸಂಚಲನ ನಡೆಯಿತು.
ಪಥಸಂಚಲನಕ್ಕೆ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಚಾಲನೆ ನೀಡಿದರು.
ಮಂಗೇರಿರ ಮುತ್ತಣ್ಣ ವೃತ್ತದ ಮೂಲಕ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ವೃತ್ತ, ಮಹದೇವಪೇಟೆ, ತ್ಯಾಗರಾಜ ಕಾಲೋನಿ, ಮುತ್ತಪ್ಪ ದೇವಾಲಯ ಮಾರ್ಗವಾಗಿ ಪೊಲೀಸ್ ಕವಾಯತು ಮೈದಾನದವರೆಗೆ ಪಥಸಂಚಲನ ನಡೆಯಿತು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ ರಾಜ್, ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಮತ್ತು ಸೇನಾ ತುಕಡಿಗಳ ಸಿಬ್ಬಂದಿ ಸೇರಿದಂತೆ ಸುಮಾರು 400 ಮಂದಿ ಪಥಸಂಚಲನದಲ್ಲಿ ಪಾಲ್ಗೊಂಡಿದ್ದರು.









