ಮಡಿಕೇರಿ ಏ.17 : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ನಾಲ್ಕುನಾಡು ಮುಸ್ಲಿಂ ಒಕ್ಕೂಟದ ಪ್ರಮುಖ, ಅಲ್ಪಸಂಖ್ಯಾತ ಮುಖಂಡ ಕುಂಜಿಲದ ನಾಸರ್ ಮಕ್ಕಿ ಸೋಮವಾರ ಚುನಾವಣಾಧಿಕಾರಿ ಶಬಾನಾ ಎಂ. ಷೇಕ್ ಅವರಿಗೆ ನಾಮಪತ್ರ ಸಲ್ಲಿಸಿದರು.
ವಿರಾಜಪೇಟೆ ಗಡಿಯಾರ ಕಂಬದ ಬಳಿಯಿಂದ ಬೆಂಬಲಿಗರೊoದಿಗೆ ಮೆರವಣಿಗೆಯಲ್ಲಿ ಬಂದ ನಾಸರ್ ಮಕ್ಕಿ ನಾಮಪತ್ರ ಸಲ್ಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಕೊಡಗಿನಲ್ಲಿ ಹಿಂದಿನಿoದಲೂ ರಾಜಕೀಯ ಪಕ್ಷಗಳು ಜಿಲ್ಲೆಯ ಅಲ್ಪಸಂಖ್ಯಾತರನ್ನು ಸೂಕ್ತ ರೀತಿಯಲ್ಲಿ ಪರಿಗಣಿಸಿಲ್ಲ ಎಂದು ಟೀಕಿಸಿದರು. ಇದೀಗ ಪರಿಸ್ಥಿತಿ ಬದಲಾಗಿದ್ದು, ಅಲ್ಪಸಂಖ್ಯಾತರು ಆಮಿಷಗಳಿಗೆ ಬಲಿಯಾಗಿ ಮತ ನೀಡುವವರಲ್ಲ ಎಂಬುವುದನ್ನು ತೋರಿಸಿಕೊಡಬೇಕಿದೆ ಎಂದರು.









