ಸೋಮವಾರಪೇಟೆ ಏ.17 : ಮಡಿಕೇರಿ ಮತ್ತು ವಿರಾಜಪೇಟೆ ಕ್ಷೇತ್ರದಲ್ಲಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಂ.ಬಿ.ಗಣೇಶ್ ಆಶಯ ವ್ಯಕ್ತಪಡಿಸಿದರು.
ಈ ಹಿಂದೆ 20 ತಿಂಗಳ ಅವದಿಯಲ್ಲಿ ಮುಖ್ಯಮಂತ್ರಿಯಾಗಿದ್ದ ಎಚ್.ಡಿ.ಕುಮಾರಸ್ವಾಮಿಯವರು ರೈತರ ಸಾಲಮನ್ನಾ ಮಾಡಿದ್ದಾರೆ. 2018ರಲ್ಲಿ ಪ್ರಕೃತಿ ವಿಕೋಪ ಸಂಭವಿಸಿದ ಹಿನ್ನೆಲೆಯಲ್ಲಿ ಮನೆ ಆಸ್ತಿ ಕಳೆದುಕೊಂಡ ಸಂತ್ರಸ್ತರಿಗೆ 1000 ಮನೆಗಳನ್ನು ನಿರ್ಮಿಸಿಕೊಟ್ಟು, ಕೊಡಗಿನ ಅಭಿವೃದ್ಧಿಗೆ ಶ್ರಮಿಸಿದ್ದಾರೆ ಎಂದು ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಜೆಡಿಎಸ್ ಅಧಿಕಾರಕ್ಕೆ ಬಂದರೆ ಸ್ತ್ರೀಶಕ್ತಿ, ಸ್ವಸಹಾಯ ಸಂಘದ ಸದಸ್ಯರ ಸಾಲಮನ್ನಾ, ಆಟೋಚಾಲಕರಿಗೆ 2ಸಾವಿರ ರೂ.ಗಳ ಮಾಶಾಸನ, ವೃದ್ಧಾಪ್ಯ ಹಾಗು ಅಂಗವಿಕಲರಿಗೆ 5 ಸಾವಿರ ರೂ.ಗಳ ಮಾಶಾಸನ, ಬಡ ಕುಟುಂಬಕ್ಕೆ ವಾರ್ಷಿಕ ಉಚಿತ 5 ಗ್ಯಾಸ್ ಸಿಲಿಂಡರ್‌ಗಳನ್ನು ವಿತರಿಸುವ ಭರವಸೆಯನ್ನು ಜೆಡಿಎಸ್ ನೀಡಿದೆ. ನುಡಿದಂತೆ ನಡೆಯುವ ಏಕೈಕ ಪಕ್ಷ ಜೆಡಿಎಸ್ ಎಂದು ಹೇಳಿದರು. ವಿರಾಜಪೇಟೆ ಕ್ಷೇತ್ರಕ್ಕೆ ಅಲ್ಪಸಂಖ್ಯಾಯತರಿಗೆ ಟಿಕೇಟ್ ನೀಡಿದ ಕೀರ್ತಿ ಜೆಡಿಎಸ್‌ಗೆ ಸಲ್ಲುತ್ತದೆ ಎಂದರು.
ಪ್ರಾದೇಶಿಕ ಪಕ್ಷದ ಆಡಳಿತದಿಂದ ಮಾತ್ರ ರಾಜ್ಯದ ಅಭಿವೃದ್ಧಿ ಸಾಧ್ಯ. ರಾಷ್ಟ್ರೀಯ ಪಕ್ಷಗಳಿಗೆ ಮತ ಹಾಕಿದರೆ, ಅವರ ಹೈಕಮಾಂಡ್ ನಾಗಪುರ ಮತ್ತು ದೆಹಲಿಯಲ್ಲಿರುತ್ತದೆ. ಅಭಿವೃದ್ಧಿಗೆ ಅನುದಾನಕ್ಕೆ ಅಲ್ಲಿಂದ ಆದೇಶ ಬರಬೇಕು. ಆದರೆ ಜೆಡಿಎಸ್ ಹೈಕಮಾಂಡ್ ಹೊಳೆನರಸಿಪುರದಲ್ಲಿ ಇದೆ ಎಂದು ಪಕ್ಷದ ಅಭ್ಯರ್ಥಿ ನಾಪಂಡ ಮುತ್ತಪ್ಪ ಹೇಳಿದರು.
ಕಳೆದ 25 ವರ್ಷಗಳಿಂದ ಮಾಡದ ಕಾಮಗಾರಿಗಳನ್ನು ಹಾಲಿ ಶಾಸಕರು ಈಗ ಮಾಡುತ್ತೇನೆ ಎಂದು ಹಸಿ ಸುಳ್ಳು ಹೇಳಿಕೊಂಡು ಹೋಗುತ್ತಿದ್ದಾರೆ. ಜಿಲ್ಲೆಯ ಗ್ರಾಮೀಣ ಭಾಗದ ರಸ್ತೆ, ಸೇತುವೆ ಇನ್ನಿತರ ಕಾಮಗಾರಿಗೆ 5ಸಾವಿರ ಕೋಟಿ ರೂ. ಅನುದಾನ ಬೇಕಾಗಿದೆ. 16 ಸಾವಿರ ಕುಟುಂಬಗಳಿಗೆ ವಾಸಕ್ಕೆ ಮನೆಗಳಿಲ್ಲ. ಬಿಜೆಪಿಯಿಂದ ಸವಕಲು ನಾಣ್ಯ ಶಾಸಕ ಸ್ಥಾನದ ಕನಸ್ಸು ಕಾಣುತ್ತಿದೆ. ಅರಕಲುಗೂಡಿನಲ್ಲಿ ಅಭಿವೃದ್ಧಿ ಕಾಮಗಾರಿ ಮಾಡಲಾಗದ ವ್ಯಕ್ತಿ ಕೊಡಗಿನಲ್ಲಿ ಕಾಂಗ್ರೆಸ್‌ನಿಂದ ಕಿಸಿಯುತ್ತಾರಂತೆ ಎಂದು ರಾಷ್ಟ್ರೀಯ ಪಕ್ಷಗಳ ಅಭ್ಯರ್ಥಿಗಳನ್ನು ಮುತ್ತಪ್ಪ ಮೂದಲಿಸಿದರು.
ಗೋಷ್ಠಿಯಲ್ಲಿ ಪಕ್ಷದ ತಾಲ್ಲೂಕು ಅಧ್ಯಕ್ಷ ಸಿ.ಎಸ್.ನಾಗರಾಜು, ರಾಜ್ಯ ಉಪಾಧ್ಯಕ್ಷ ಶರೀಪ್, ಜಿಲ್ಲಾ ಪ್ರ.ಕಾರ್ಯದರ್ಶಿ ಆದಿಲ್‌ಪಾಷ ಇದ್ದರು.
Breaking News
- *ದಕ್ಷಿಣ ಕೊಡಗಿನಲ್ಲಿ ಸಣ್ಣ ಕೈಗಾರಿಕಾ ಪ್ರದೇಶಾಭಿವೃದ್ಧಿ : 50 ಏಕರೆ ಭೂಮಿ ಮಂಜೂರಾತಿಗೆ ಆಪ್ ಮನವಿ*
- *ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜು : 8ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ*
- *ರಾಷ್ಟ್ರೀಯ ಜೂನಿಯರ್ ಹಾಕಿ ತಂಡಕ್ಕೆ ಕೊಡಗಿನ ವಿಶ್ವಜಿತ್ ಹಾಗೂ ಪೂಜಿತ್ ಆಯ್ಕೆ*
- *ರಾಷ್ಟ್ರೀಯ ಜೂನಿಯರ್ ಹಾಕಿ ತಂಡಕ್ಕೆ ದೃಶ್ಯ ಅಚ್ಚಪ್ಪ ಆಯ್ಕೆ*
- *ಹೆಬ್ಬಾಲೆ : ಜ.23 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
- *ಶ್ರೀ ರಾಮ ಜನ್ಮಭೂಮಿ ಸೇವಾ ಸಮಿತಿಯಿಂದ ಮಡಿಕೇರಿಯಲ್ಲಿ ಅನ್ನದಾನ*
- *ಜ.26 ರಂದು ಲೋಕಾಪ೯ಣೆಯಾಗಲಿದೆ ಮತ್ತೆ ವಸಂತ*
- *ಹೆಗ್ಗಳ ಗ್ರಾಮದ ಸರ್ಕಾರಿ ಶಾಲೆಗೆ ಕಂಪ್ಯೂಟರ್ ಕೊಡುಗೆ*
- *ಎನ್.ಯು.ನಾಚಪ್ಪ ವಿರುದ್ಧ ಪ್ರಕರಣ : ಮಡಿಕೇರಿ ಕೊಡವ ಸಮಾಜ ಖಂಡನೆ*
- *ವಿರಕ್ತ ಮಠದ ಶ್ರೀ ಬಸವಪ್ರಭು ಸ್ವಾಮೀಜಿಗೆ ಪಿ.ಹೆಚ್.ಡಿ ಪದವಿ*