ಮಡಿಕೇರಿ ಏ.17 : ರಾಜ್ಯದಲ್ಲಿ ಮೇ 10 ರಂದು ನಡೆಯುವ ವಿಧಾನಸಭಾ ಚುನಾವಣೆೆ ಮತದಾನದ ಪವಿತ್ರ ದಿನ ಮಾತ್ರವಲ್ಲ ಶೇ.40ರ ಕಮಿಷನ್ ದಂಧೆ, ಮೇರೆ ಮೀರಿರುವ ಭ್ರಷ್ಟಾಚಾರವನ್ನು ಓಡಿಸುವ ಮತ್ತು ಡಬಲ್ ಇಂಜಿನ್ ಸರ್ಕಾರಕ್ಕೆ ಉತ್ತರ ನೀಡುವ ಮಹತ್ವದ ದಿನವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅಭಿಪ್ರಾಯಪಟ್ಟಿದ್ದಾರೆ.
ನಗರದ ಗಾಂಧಿ ಮೈದಾನದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಪಾಲ್ಗೊಂಡು ಮಡಿಕೇರಿ ಕ್ಷೇತ್ರದ ಅಭ್ಯರ್ಥಿ ಡಾ.ಮಂತರ್ ಗೌಡ ಹಾಗೂ ವಿರಾಜಪೇಟೆ ಕ್ಷೇತ್ರದ ಅಭ್ಯರ್ಥಿ ಅಜ್ಜಿಕುಟ್ಟೀರ ಪೊನ್ನಣ್ಣ ಅವರ ಗೆಲುವಿಗಾಗಿ ಮತಯಾಚನೆ ಮಾಡಿ ಅವರು ಮಾತನಾಡಿದರು.
ರಾಜ್ಯದ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಿತ್ಯೋಪಯೋಗಿ ವಸ್ತಗಳ ಬೆಲೆ ಗಗನಕ್ಕೇರಿದ್ದು, ಜನಸಾಮಾನ್ಯರು ಆರ್ಥಿಕ ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ. ರೈತರ ಆದಾಯವನ್ನು ದ್ವಿಗುಣಗೊಳಿಸುವುದು ಮತ್ತು ಪ್ರತಿಯೊಬ್ಬರ ಬ್ಯಾಂಕ್ ಖಾತೆಗೆ 15 ಲಕ್ಷ ರೂ. ಕೊಡುವುದಾಗಿ ಡಬಲ್ ಇಂಜಿನ್ ಸರ್ಕಾರ ನೀಡಿದ್ದ ಭರವಸೆಗಳು ಹುಸಿಯಾಗಿದೆ. ಇದಕ್ಕೆ ಮೇ 10 ರಂದು ಜನರೇ ಉತ್ತರ ನೀಡಬೇಕು ಮತ್ತು ಈ ಅವಕಾಶವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಕರೆ ನಿಡಿದರು.
::: 150 ಸ್ಥಾನ :::
ರಾಜ್ಯದಲ್ಲಿ ರಾಜಕೀಯ ಬದಲಾವಣೆಯ ಪರ್ವಕಾಲ ಆರಂಭವಾಗಿದ್ದು, ಬದಲಾವಣೆಯ ಬಲವಾದ ಗಾಳಿ ಬೀಸಲಾರಂಭಿಸಿದೆ. ಪ್ರಸ್ತುತ ವಿವಿಧ ಪಕ್ಷಗಳ ಪ್ರಮುಖರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ. ಬಿಜೆಪಿ ಪಕ್ಷವನ್ನು ತೊರೆದು ಕಾಂಗ್ರೆಸ್‌ಗೆ ಸೇರ್ಪಡೆಗೊಂಡ ಜಗದೀಶ್ ಶೆಟ್ಟರ್ ಹಾಗೂ ಉಪ ಮುಖ್ಯಮಂತ್ರಿಯಾಗಿದ್ದ ಸವದಿ ಅವರ ಸೇರ್ಪಡೆಯಿಂದ ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಪಕ್ಷ 150 ಕ್ಕೂ ಹೆಚ್ಚಿನ ಸ್ಥಾನಗಳನ್ನು ಪಡೆಯುವುದು ನಿಶ್ಚಿತವಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
::: ನಿಮ್ಮ ಮಡಿಲಿಗೆ ಹಾಕಿದ್ದೇವೆ :::
ಮಡಿಕೇರಿ ಕ್ಷೇತ್ರದ ಸ್ಪರ್ಧೆಗೆ ಕಾಂಗ್ರೆಸ್ ನಿಂದ ಡಾ.ಮಂತರ್ ಗೌಡ ಅವರಿಗೆ ಅವಕಾಶ ನೀಡುವ ಮೂಲಕ, ಕ್ಷೇತ್ರದ ಜನತೆಯ ಮಡಿಲಿಗೆ ಅವರನ್ನು ಹಾಕಿದ್ದೇನೆ. ಡಾ.ಮಂತರ್ ಹಾಗೂ ವಿರಾಜಪೇಟೆ ಕ್ಷೇತ್ರದ ಎ.ಎಸ್.ಪೊನ್ನಣ್ಣ ಅವರ ಗೆಲುವಿಗೆ ಪಕ್ಷದ ಎಲ್ಲಾ ಪ್ರಮುಖರು, ಕಾರ್ಯಕರ್ತರು ಕಟಿಬದ್ಧರಾಗಿದ್ದು, ಕೊಡಗಿನಲ್ಲು ಬದಲಾವಣೆಯ ಗಾಳಿ ಬೀಸುತ್ತಿದೆಯೆಂದು ತಿಳಿಸಿದರು.
ರಾಜ್ಯದಲ್ಲಿ ಬಿಜೆಪಿಗೆ ಬುನಾದಿ ಹಾಕಿದ್ದ ಎ.ಕೆ.ಸುಬ್ಬಯ್ಯ ಅವರು ಆ ನಂತರ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡoರು. ಇವರ ಸುಪುತ್ರ ಎ.ಎಸ್.ಪೊನ್ನಣ್ಣ ಹಾಗೂ ಕೊಡಗಿನವರೇ ಆಗಿರುವ ಡಾ.ಮಂಥರ್ ಗೌಡ ಯುವಶಕ್ತಿಯಾಗಿದ್ದಾರೆ. ಪ್ರಜ್ಞಾವಂತ, ಬುದ್ಧಿವಂತ, ಕ್ರಿಯಾಶೀಲ ಅಭ್ಯರ್ಥಿಗಳನ್ನು ಕೊಡಗಿಗೆ ನೀಡಿದ್ದೇವೆ. ಇವರಿಗೆ ಎಲ್ಲಾ ಕಾರ್ಯಕರ್ತರು ಬೆಂಬಲ ನೀಡಬೇಕೆಂದು ಮನವಿ ಮಾಡಿದರು.
::: ಭರವಸೆ ಈಡೇರಲಿದೆ :::
ಪ್ರಜಾಧ್ವನಿ ಯಾತ್ರೆಯ ಮೂಲಕ 200 ಯೂನಿಟ್ ಉಚಿತ ವಿದ್ಯುತ್, ಪ್ರತೀ ತಿಂಗಳು ಮಹಿಳೆಯರಿಗೆ 2 ಸಾವಿರ ರೂ. ನೀಡುವ ಯೋಜನೆಯನ್ನೂ ಕಾಂಗ್ರೆಸ್ ಘೋಷಿಸಿದೆ. ನಾವು ಕೊಟ್ಟ ಗ್ಯಾರಂಟಿಯನ್ನು ಅಧಿಕಾರಕ್ಕೆ ಬಂದ ಒಂದು ತಿಂಗಳಲ್ಲಿ ಈಡೇರಿಸದೇ ಇದ್ದಲ್ಲಿ ಮತ್ತೆ ಕಾಂಗ್ರೆಸ್‌ಗೆ ಎಂದಿಗೂ ಮತ ಕೇಳುವುದಿಲ್ಲವೆಂದು ಸ್ಪಷ್ಟಪಡಿಸಿದರು.
ಸಮಾವೇಶದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಚ್.ಎಸ್.ಚಂದ್ರಮೌಳಿ, ವಿಧಾನ ಪರಿಷತ್ ಮಾಜಿ ಸದಸ್ಯರುಗಳಾದ ವೀಣಾ ಅಚ್ಚಯ್ಯ, ಸಿ.ಎಸ್.ಅರುಣ್ ಮಾಚಯ್ಯ, ಮಾಜಿ ಸಚಿವೆ ಸುಮಾವಸಂತ್, ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಟಿ.ಪಿ.ರಮೇಶ್, ಹರಪಳ್ಳಿ ರವೀಂದ್ರ, ಕೆ.ಪಿ.ಚಂದ್ರಕಲಾ, ಕೆ.ಎಂ.ಲೋಕೇಶ್, ತೆನ್ನಿರ ಮೈನಾ, ಬಿ.ವೈ.ರಾಜೇಶ್, ಸುರಯ್ಯಾ ಅಬ್ರಾರ್, ಪ್ರಕಾಶ್ ಆಚಾರ್ಯ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
Breaking News
- *ದಕ್ಷಿಣ ಕೊಡಗಿನಲ್ಲಿ ಸಣ್ಣ ಕೈಗಾರಿಕಾ ಪ್ರದೇಶಾಭಿವೃದ್ಧಿ : 50 ಏಕರೆ ಭೂಮಿ ಮಂಜೂರಾತಿಗೆ ಆಪ್ ಮನವಿ*
- *ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜು : 8ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ*
- *ರಾಷ್ಟ್ರೀಯ ಜೂನಿಯರ್ ಹಾಕಿ ತಂಡಕ್ಕೆ ಕೊಡಗಿನ ವಿಶ್ವಜಿತ್ ಹಾಗೂ ಪೂಜಿತ್ ಆಯ್ಕೆ*
- *ರಾಷ್ಟ್ರೀಯ ಜೂನಿಯರ್ ಹಾಕಿ ತಂಡಕ್ಕೆ ದೃಶ್ಯ ಅಚ್ಚಪ್ಪ ಆಯ್ಕೆ*
- *ಹೆಬ್ಬಾಲೆ : ಜ.23 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
- *ಶ್ರೀ ರಾಮ ಜನ್ಮಭೂಮಿ ಸೇವಾ ಸಮಿತಿಯಿಂದ ಮಡಿಕೇರಿಯಲ್ಲಿ ಅನ್ನದಾನ*
- *ಜ.26 ರಂದು ಲೋಕಾಪ೯ಣೆಯಾಗಲಿದೆ ಮತ್ತೆ ವಸಂತ*
- *ಹೆಗ್ಗಳ ಗ್ರಾಮದ ಸರ್ಕಾರಿ ಶಾಲೆಗೆ ಕಂಪ್ಯೂಟರ್ ಕೊಡುಗೆ*
- *ಎನ್.ಯು.ನಾಚಪ್ಪ ವಿರುದ್ಧ ಪ್ರಕರಣ : ಮಡಿಕೇರಿ ಕೊಡವ ಸಮಾಜ ಖಂಡನೆ*
- *ವಿರಕ್ತ ಮಠದ ಶ್ರೀ ಬಸವಪ್ರಭು ಸ್ವಾಮೀಜಿಗೆ ಪಿ.ಹೆಚ್.ಡಿ ಪದವಿ*