ಮಡಿಕೇರಿ ಏ.18 : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎ.ಎಸ್.ಪೊನ್ನಣ್ಣ ಅವರು ಇಂದು ನಾಮಪತ್ರ ಸಲ್ಲಿಸಿದರು. ಪಕ್ಷದ ಪ್ರಮುಖರೊಂದಿಗೆ ಮೆರವಣಿಗೆ ಮೂಲಕ ಬಂದ ಪೊನ್ನಣ್ಣ ಅವರು ತಾಲ್ಲೂಕು ಕಚೇರಿಯಲ್ಲಿ ಚುನಾವಣಾಧಿಕಾರಿ ಶಬಾನ ಎಂ.ಶೇಖ್ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಎ.ಎಸ್.ಪೊನ್ನಣ್ಣ ಅವರ ಪತ್ನಿ ಕಾಂಚನ , ವಿಧಾನ ಪರಿಷತ್ ಮಾಜಿ ಸದಸ್ಯರಾದ ವೀಣಾ ಅಚ್ಚಯ್ಯ, ಅರುಣ್ ಮಾಚಯ್ಯ, ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ ಹಾಜರಿದ್ದರು.
::: ಮೆರವಣಿಗೆ ::: ನಾಮಪತ್ರ ಸಲ್ಲಿಕೆಗೂ ಮೊದಲು ನಗರದ ವಿವಿಧ ದೇವಾಲಯಗಳಲ್ಲಿ ಪೂಜೆ ಸಲ್ಲಿಸಿದ ಪೊನ್ನಣ್ಣ, ಪಂಜರಪೇಟೆಯಿಂದ ಚುನಾವಣಾಧಿಕಾರಿ ಕಚೇರಿವರೆಗೂ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರೊಂದಿಗೆ ಬೃಹತ್ ಮೆರವಣಿಗೆ ನಡೆಸಿದರು. ಕೆಪಿಸಿಸಿ ವಕ್ತಾರ ಸಂಕೇತ್ ಪೂವಯ್ಯ, ವಿರಾಜಪೇಟೆ, ಪೊನ್ನಂಪೇಟೆ, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ರಂಜಿ ಪೂಣಚ್ಚ, ಮಿದೇರಿರ ನವೀನ್, ಇಸ್ಮಾಯಿಲ್ ಸೇರಿದಂತೆ ಕಾಂಗ್ರೆಸ್‌ನ ವಿವಿಧ ಘಟಕಗಳ ಪದಾಧಿಕಾರಿಗಳು ಹಾಜರಿದ್ದರು.