ಮಡಿಕೇರಿ ಏ.18 : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಾರ್ಟಿಯ ಅಭ್ಯರ್ಥಿಯಾಗಿ ಪೊನ್ನಂಪೇಟೆಯ ಸಿ.ಎಸ್.ರವೀಂದ್ರ ಕಣಕ್ಕಿಳಿಯಲಿದ್ದಾರೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಭೋಜಣ್ಣ ಸೋಮಯ್ಯ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಏ.19 ರಂದು ಮಧ್ಯಾಹ್ನ ರವೀಂದ್ರ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಹೇಳಿದ್ದಾರೆ.
2011ರಲ್ಲಿ ದೇಶದಲ್ಲಿ ಅಣ್ಣಾ ಹಜಾರೆ ನಡೆಸಿದ ಜನಾಂದೋಲನದಿಂದ ಸ್ಫೂರ್ತಿಗೊಂಡು ನಂತರ ಸ್ಥಾಪನೆಯಾದ ಆಮ್ ಆದ್ಮಿ ಪಕ್ಷದಲ್ಲಿ ಸೇರ್ಪಡೆಗೊಂಡ ರವೀಂದ್ರ ಅಂದಿನಿಂದ ಇಂದಿನವರೆಗೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ವೃತ್ತಿಯಲ್ಲಿ ಪತ್ರಕರ್ತರಾಗಿರುವುದರಿಂದ ಜನರ ಸಮಸ್ಯೆಗಳಿಗೆ ಸುಲಭವಾಗಿ ಸ್ಪಂದಿಸುವ ಇಚ್ಛಾಶಕ್ತಿಯನ್ನು ಹೊಂದಿದ್ದಾರೆ ಎಂದು ಭೋಜಣ್ಣ ಸೋಮಯ್ಯ ತಿಳಿಸಿದ್ದಾರೆ.







