ಸೋಮವಾರಪೇಟೆ ಏ.18 : ಸೋಮವಾರಪೇಟೆಯ ಹಿರಿಕರ ಗ್ರಾಮದ ಮಲ್ಲೇಶ್ವರ ದೇವಾಲಯದ ವಾರ್ಷಿಕ ವಿಶೇಷ ಪೂಜೆ ಶ್ರದ್ಧಾಭಕ್ತಿಯಿಂದ ನೆರವೇರಿತು.
ಮಂಗಳವಾರ ಬೆಳಗ್ಗಿನ ಜಾವ ಕೊಲ್ಲಿಗದ್ದೆಯ ಕೆರೆಯಲ್ಲಿ ಗಂಗಾ ಪೂಜೆ ಸಲ್ಲಿಸಿದ ಗ್ರಾಮಸ್ಥರು ಸಕಾಲದಲ್ಲಿ ಮಳೆ ಹಾಗು ಗ್ರಾಮದ ಸುಭೀಕ್ಷೆಗಾಗಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
ಬಸವಣ್ಣ ದೇವರ ಉತ್ಸವ ಮೂರ್ತಿಯನ್ನು ಅಡ್ಡಪಲ್ಲಕ್ಕಿಯಲ್ಲಿ ಕುಳ್ಳಿರಿಸಿ ಗ್ರಾಮದ ಬೀದಿಯಲ್ಲಿ ಮೆರವಣಿಗೆ ನಡೆಸಲಾಯಿತು. ಪ್ರತಿಕುಟುಂಬದವರು ಅವರ ಮನೆಗಳ ಮುಂದೆ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸಿದರು.
ದೇವಾಲಯದಲ್ಲಿ ಕಳಸ ಹಿಡಿದ ಮಹಿಳೆಯರು ದೇವಾಲಯದ ಮೂರು ಸುತ್ತು ಮೆರವಣಿಗೆ ನಡೆಸಿದರು. ನಂತರ ಕೆಂಡ ಹಾಯಲಾಯಿತು.
::: ಕ್ರೀಡಾಕೂಟ ::: ಪೂಜೆಯ ಅಂಗವಾಗಿ ಗ್ರಾಮದ ಕ್ರೀಡಾಸ್ಪರ್ಧೆಗಳು ನಡೆದವು. ಮಹಿಳೆಯರ ಹಗ್ಗಾಜಗ್ಗಾಟದಲ್ಲಿ ಚರಿತ್ರಾ ತ್ರಿಲೋಕ್ ತಂಡ ಪ್ರಥಮ, ಅಶಿಕಾ ವಿಜಯಕುಮಾರ್ ತಂಡ ದ್ವಿತೀಯ ಸ್ಥಾನ ಪಡೆಯಿತು.
ಪುರುಷರ ವಿಭಾಗದಲ್ಲಿ ಅಭಿಮನ್ಯು ತಂಡ ಪ್ರಥಮ, ದ್ರೋಣ ತಂಡ ದ್ವಿತೀಯ ಸ್ಥಾನ ಗಳಿಸಿತು.
ಬಸ್ಸು ಹುಡುಕಾಟ ಸ್ಪರ್ಧೆಯಲ್ಲಿ ಅಕ್ಷಿತಾ ದೇವರಾಜು ಪ್ರಥಮ, ಎಚ್.ಎಲ್. ಪ್ರಿಯಾ ದ್ವಿತೀಯ ಸ್ಥಾನ ಪಡೆದರು. ಕಣ್ಣಿಗೆ ಬಟ್ಟೆ ಕಟ್ಟಿ ಮಡಿಕೆ ಒಡೆಯುವ ಸ್ಪರ್ಧೆಯಲ್ಲಿ ಮಹಿಳೆಯರ ವಿಭಾಗದಲ್ಲಿ ಜ್ಯೋತಿ ಪ್ರಥಮ, ಪುರುಷರ ವಿಭಾಗದಲ್ಲಿ ಎಚ್.ಪಿ.ಸಮಿತ್ ಪ್ರಥಮ ಸ್ಥಾನ ಪಡೆದರು.
ಮಕ್ಕಳ ಕಾಳುಹೆಕ್ಕುವ ಸ್ಪರ್ಧೆಯಲ್ಲಿ ಕಶ್ವಿ ಪ್ರಥಮ, ಜನ್ಮಿತಾ ದ್ವಿತೀಯ ಸ್ಥಾನ ಪಡೆದರು. ಹಿರಿಕರ ಗ್ರಾಮಾಭಿವೃದ್ಧಿ ಮಂಡಳಿ ಅಧ್ಯಕ್ಷ ಎಚ್.ಎನ್.ಚಂದ್ರಶೇಖರ್, ಕಾರ್ಯದರ್ಶಿ ಕೀರ್ತಿ ಮುತ್ತಣ್ಣ, ಖಜಾಂಚಿ ಜಿ.ಕೆ.ವಿಜಯ್, ಪದಾಧಿಕಾರಿಗಳು ಹಾಗು ಗ್ರಾಮಸ್ಥರು ಇದ್ದರು. ಭಕ್ತಾದಿಗಳಿಗೆ ಅನ್ನದಾನ ನೆರವೇರಿತು.
Breaking News
- *ಜಯ ಹೇ ಕರ್ನಾಟಕ ಮಾತೆ ಗೀತೆಗೆ 100 ವರ್ಷ : ಕೊಡಗಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು*
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್‍ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*