ನಾಪೋಕ್ಲು ಏ.19 : ಮುಂಬರುವ ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸಲು ಪೆಬ್ಬಟ್ಟಿರ ಕುಟುಂಬಸ್ಥರು ನಿರ್ಧರಿಸಿದ್ದಾರೆ.
ಅಯ್ಯಂಗೇರಿ ಗ್ರಾ.ಪಂ ವ್ಯಾಪ್ತಿಯ ದೊಡ್ಡ ಪುಲಿಕೋಟು ಗ್ರಾಮದ ಪೆಬ್ಬಟ್ಟಿರ ಕುಟುಂಬಸ್ಥರನ್ನು ಸರ್ಕಾರದ ವಿವಿಧ ಕಾಮಗಾರಿಗಳಿಂದ ವಂಚಿಸಲಾಗಿದೆ ಎಂದು ಆರೋಪಿಸಿದರು.
ಕುಟುಂಬದಲ್ಲಿ 70 ಮತದಾರರಿದ್ದು, ಈ ಬಾರಿ ನಾವು ಮತದಾನ ಮಾಡುವುದಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದ ಕುಟುಂಬಸ್ಥರು, ಚುನಾವಣೆ ಬಹಿಷ್ಕಾರದ ಬ್ಯಾನರ್ ಅಳವಡಿಸಿದ್ದಾರೆ.
ವರದಿ : ಸಾಜಿದ್ ಪಯ್ಯಡಿ