ಮಡಿಕೇರಿ ಏ.19 : ವಿಧಾನಸಭಾ ಚುನಾವಣಾ ಹಿನ್ನೆಲೆ ಭಾರತ ಚುನಾವಣಾ ಆಯೋಗವು ಕೊಡಗು ಜಿಲ್ಲೆಯ 208-ಮಡಿಕೇರಿ ವಿಧಾನಸಭಾ ಕ್ಷೇತ್ರ ಮತ್ತು 209-ವಿರಾಜಪೇಟೆ ವಿಧಾನಸಭಾ ಕ್ಷೇತ್ರಗಳಿಗೆ ಸಾಮಾನ್ಯ ವೀಕ್ಷಕರಾಗಿ ವಿಕ್ರಮ್ ಸಿಂಗ್ ಮಲಿಕ್ ಭಾ.ಆ.ಸೇ. ಅವರನ್ನು ನಿಯೋಜಿಸಿದ್ದು, ಏ.18 ರಂದು ಕೊಡಗು ಜಿಲ್ಲೆಯಲ್ಲಿ ವರದಿ ಮಾಡಿಕೊಂಡಿದ್ದಾರೆ.
ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಬಿ.ಸಿ.ಸತೀಶ ಅವರನ್ನು ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಭೇಟಿ ಮಾಡಿ ಚುನಾವಣೆ ಸಿದ್ಧತೆ ಬಗ್ಗೆ ಪರಿಶೀಲಿಸಿದರು.
ವಿಧಾನಸಭಾ ಚುನಾವಣಾ ಸಂಬಂಧ ಹೆಚ್ಚಿನ ಮಾಹಿತಿಗೆ ಜಿಲ್ಲಾಡಳಿತ ಭವನದ ಮೊದಲ ಮಹಡಿಯ ಕೊಠಡಿ ಸಂಖ್ಯೆ 3 ರಲ್ಲಿ ಬೆಳಗ್ಗೆ 11 ರಿಂದ ಮಧ್ಯಾಹ್ನ 12 ಗಂಟೆ ವರೆಗೆ ನೇರವಾಗಿ ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 6360041101 ಅಥವಾ ಸಾಮಾನ್ಯ ವೀಕ್ಷಕರ ಸಂಪರ್ಕ ಅಧಿಕಾರಿ ಡಾ.ಜೆ.ಆರ್.ಬಾಲಸುಬ್ರಮಣ್ಯಂ 9632953019 ಮಾಹಿತಿ ಪಡೆಯಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.










