ಮಡಿಕೇರಿ ಏ.19 : ನಗರದ ಕೇಂದ್ರೀಯ ವಿದ್ಯಾಲಯದಲ್ಲಿ ಕೊಡಗು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ, ಜಿಲ್ಲಾ ಅಗ್ನಿಶಾಮಕ ದಳ ಮತ್ತು ತುರ್ತು ಸೇವೆಗಳ ಸಹಯೋಗದೊಂದಿಗೆ ಅಗ್ನಿ ಅನಾಹುತ ತಡೆಯುವ ಬಗ್ಗೆ ಅಣಕು ಕಾರ್ಯಾಚರಣೆಯು ನಡೆಯಿತು.
ಕೊಡಗು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರ ನೇತೃತ್ವದಲ್ಲಿ ಅಣಕು ಕಾರ್ಯಾಚರಣೆ ನಡೆಯಿತು. ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರಾದ ಆರ್.ಎಂ.ಅನನ್ಯ ವಾಸುದೇವ್ ಅವರ ಮಾರ್ಗದರ್ಶನದಲ್ಲಿ, ಮಡಿಕೇರಿ ಅಗ್ನಿಶಾಮಕ ಠಾಣೆಯ ಲೀಡ್ ಫೈರ್ಮೆನ್ ನಾಗರಾಜ ಪಲ್ಲೇದ್ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡರು.
ನಂತರ ವಿವಿಧ ರೀತಿಯ ಅಗ್ನಿ ಅನಾಹುತ ಹಾಗೂ ಅಗ್ನಿ ನಂದಿಸುವಿಕೆಯ ಬಗ್ಗೆ ವಿದ್ಯಾರ್ಥಿಗಳಿಗೆ ಪ್ರದರ್ಶನ ಮೂಲಕ ಮಾಹಿತಿ ನೀಡಲಾಯಿತು. ಕೇಂದ್ರೀಯ ವಿದ್ಯಾಲಯದ ಪ್ರಾಂಶುಪಾಲರಾದ ಅರ್ಜುನ್ ಸಿಂಗ್ ಹಾಗೂ ಶಿಕ್ಷಕರು ಹಾಜರಿದ್ದರು.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*