ವಿರಾಜಪೇಟೆ ಏ.19 : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಂ.ಎ ಮನ್ಸೂರ್ ಆಲಿ ಇಂದು ನಾಮಪತ್ರ ಸಲ್ಲಿಸಿದರು.
ಪಕ್ಷದ ಪ್ರಮುಖರೊಂದಿಗೆ ಮೆರವಣಿಗೆಯ ಮೂಲಕ ಬಂದ ಮನ್ಸೂರ್ ಆಲಿ ತಾಲೂಕು ಕಚೇರಿಯಲ್ಲಿ ಚುನಾವಣಾಧಿಕಾರಿ ಶಬಾನಾ ಎಂ.ಶೇಖ್ ಅವರಿಗೆ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭ ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್, ಜಿಲ್ಲಾ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ಇಸಾಕ್ ಖಾನ್, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಮಂಜುನಾಥ್, ಜೆಡಿಎಸ್‍ನ ಜಿಲ್ಲಾ ಘಟಕದ ಹಿರಿಯ ಉಪಾಧ್ಯಕ್ಷ ಪಾಣತಲೆ ವಿಶ್ವನಾಥ್ ಹಾಜರಿದ್ದರು.
:: ಮೆರವಣಿಗೆ :: ನಾಮಪತ್ರ ಸಲ್ಲಿಕೆಗೂ ಮೊದಲು ವಿರಾಜಪೇಟೆ ಪಟ್ಟಣದ ಗಡಿಯಾರ ಕಂಬದ ಬಳಿಯಿಂದ ಚುನಾವಣಾಧಿಕಾರಿ ಕಚೇರಿವರೆಗೂ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರೊಂದಿಗೆ ಬೃಹತ್ ಮೆರವಣಿಗೆ ನಡೆಸಿದರು. ಈ ಸಂದರ್ಭ ಮಡಿಕೇರಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನಾಪಂಡ ಮುತ್ತಪ್ಪ, ವಿರಾಜಪೇಟೆ ತಾಲೂಕು ಜೆಡಿಎಸ್ ಅಧ್ಯಕ್ಷ ಪಿ.ಎ.ಮಂಜುನಾಥ್, ಜಿಲ್ಲಾ ಯುವ ಜೆಡಿಎಸ್ ಅಧ್ಯಕ್ಷ ವಿಶ್ವ, ಪ್ರಧಾನ ಕಾರ್ಯದರ್ಶಿ ಜಾಸೀರ್ ಮೂರ್ನಾಡು, ಜಿಲ್ಲಾ ಜೆಡಿಎಸ್ ಖಜಾಂಜಿ ಡೆನ್ನಿ ಬರೋಸ್, ಉಪಾಧ್ಯಕ್ಷ ಯೂಸುಫ್ ಕೊಂಡಂಗೇರಿ, ಕಾರ್ಯದರ್ಶಿ ಸುನಿಲ್, ಮುಖಂಡರಾದ ಪಂದ್ಯಂಡ ರವಿ ಮಾದಪ್ಪ, ಕುಟ್ಟ ವಿಭಾಗದ ನಾಯಕರಾದ ರನ್ನಿ, ಬಾಳೆಕುಟ್ಟಿರ ದೀನಿ, ಎ. ಸನ್ನು ಕುಶಾಲಪ್ಪ, ಪಾಣತ್ತಲೆ ಸತ್ಯ, ಹರ್ಷ ಟಿ.ಆರ್.ಸೂರ್ಯ, ಅಮ್ಮತ್ತಿ ಜಯಮ್ಮ, ಮಜೀದ್ ಚೋಕಂಡಹಳ್ಳಿ, ಯೋಗೇಶ್ ನಾಯ್ಡು, ಜುಬೈದ ನಬುವತ್, ಗ್ರಾ.ಪಂ ಸದಸ್ಯೆ ಭೈರ ಬೇಬಿ, ಸೈಪುದ್ದೀನ್ ಚಾಮಿಯಾಲ ಹಾಗೂ ನೂರಾರು ಬೆಂಬಲಿಗರು, ಅಭಿಮಾನಿಗಳು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮನ್ಸೂರ್ ಆಲಿ, ನಾನೊಬ್ಬ ಜೆಡಿಎಸ್ ಸಾಮಾನ್ಯ ಕಾರ್ಯಕರ್ತ, ನನ್ನ ಬಳಿ ಹಣ ಬಲವಿಲ್ಲ, ಜನಬಲವಿದೆ. ಕಳೆದ ಹಲವಾರು ವರ್ಷಗಳಿಂದ ಜೆಡಿಎಸ್ ಪಕ್ಷಕ್ಕೆ ಶಿಸ್ತಿನ ಸಿಪಾಯಿಯಂತೆ ಕೆಲಸ ಮಾಡಿದ್ದೇನೆ. ಇದೀಗ ನನ್ನನ್ನು ಗುರುತಿಸಿ ಪಕ್ಷ ಅಭ್ಯರ್ಥಿಯನ್ನಾಗಿ ಮಾಡಿದ್ದಾರೆ. ಸಾಮಾನ್ಯ ಕಾರ್ಯಕರ್ತರಿಗೆ ಜೆಡಿಎಸ್ ಪಕ್ಷದಲ್ಲಿ ಮಾತ್ರ ಟಿಕೆಟ್ ನೀಡುವುದು. ಅಲ್ಪಸಂಖ್ಯಾತರಿಗೆ ಇದುವರೆಗೆ ಕ್ಷೇತ್ರದಲ್ಲಿ ಯಾವ ಪಕ್ಷವೂ ಟಿಕೆಟ್ ನೀಡಿಲ್ಲ. ಜೆಡಿಎಸ್ ಪಕ್ಷ ಅಲ್ಪಸಂಖ್ಯಾತ ಸಾಮಾನ್ಯ ಕಾರ್ಯಕರ್ತನಾದ ನನಗೆ ಟಿಕೆಟ್ ನೀಡಿದೆ. ಜೆಡಿಎಸ್ ಜಾತ್ಯತೀತ ನಿಲುವಿನ ಪಕ್ಷ. ರಾಷ್ಟ್ರೀಯ ಪಕ್ಷಗಳು ಅಲ್ಪಸಂಖ್ಯಾತರನ್ನು ಕೇವಲ ವೋಟ್ ಬ್ಯಾಂಕ್‍ಗಾಗಿ ಬಳಸಿಕೊಂಡಿದ್ದಾರೆ. ಈ ಬಾರಿ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ನಡೆಯುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ಮಾತನಾಡಿ, 2018-19ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದ ಸಂದರ್ಭ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿ ಅವರು ಕೊಡಗಿನ ಜನರ ಸಂಕಷ್ಟಕ್ಕೆ ಸ್ಪಂದಿಸಿ ಪರಿಹಾರ, ಮನೆ ನಿರ್ಮಾಣಕ್ಕೆ ಅನುದಾನ ಹಾಗೂ ಬಾಡಿಗೆ ಮನೆಯ ಭತ್ಯ ನೀಡಿ ಎರಡು ವರ್ಷಗಳ ವಿಕೋಪದಲ್ಲಿ ಜನರಿಗೆ ಅಭಯ ನೀಡಿದ್ದಾರೆ. ಅಲ್ಲದೆ ಕ್ರೀಡಾ ಜಿಲ್ಲೆ ಕೊಡಗಿಗೆ ಸೂಕ್ತ ಅನುದಾನ ನೀಡಿದ್ದಾರೆ. ಆದರೆ ಈ ಕ್ಷೇತ್ರದಲ್ಲಿ ಇಪ್ಪತ್ತು ವರ್ಷ ಜನಪ್ರತಿನಿಧಿಯಾಗಿದ್ದ ರಾಷ್ಟ್ರೀಯ ಪಕ್ಷದ ಕಾರ್ಯ ವೈಖರಿಯಿಂದ ಜನ ಭ್ರಮನಿರಶನ ಹೊಂದಿದ್ದಾರೆ. ಸೂಕ್ತ ಅಭಿವೃದ್ದಿ ಕೆಲಸಗಳು ಆಗಿಲ್ಲ. ಬಿಜೆಪಿಯ ಮೇಲೆ ಜನರ ಒಲವು ಕಡಿಮೆಯಾಗಿದ್ದು, ನಮಗೆ ಈ ಕ್ಷೇತ್ರದಲ್ಲಿ ಹೆಚ್ಚಿನ ಅನೂಕೂಲವಾಗಲಿದೆ ಎಂದರು.
Breaking News
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*
- *ದೇಶ ದ್ರೋಹದ ಪ್ರಕರಣ ದಾಖಲಿಸಲು ಕೆ.ಜಿ.ಬೋಪಯ್ಯ ಆಗ್ರಹ*
- *ಬಿಜೆಪಿ, ಜೆಡಿಎಸ್ ಗೆ ಜನ ತಕ್ಕ ಪಾಠ ಕಲಿಸಿದ್ದಾರೆ : ಎಂ.ಎ.ಕಲೀಲ್ ಬಾಷ*
- *ಕೆವಿ ಎನ್ಸಿಸಿ ಕೆಡೆಟ್ ಗಳಿಂದ ಕಾಯ೯ಪ್ಪ ಪ್ರತಿಮೆ ಸ್ವಚ್ಛತೆ*
- *ಸೋಮವಾರಪೇಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ*