ಮಡಿಕೇರಿ ಏ.20 : ಸೂಡಾನ್ ದೇಶದಲ್ಲಿ ಸೇನೆ ಹಾಗೂ ಅರೆ ಸೇನಾಪಡೆಗಳ ನಡುವಿನ ಸಂಘರ್ಷದಿಂದ ಅಪಾರ ಪ್ರಮಾಣದ ಸಾವು ನೋವು ಸಂಭವಿಸಿದೆ. ಕರ್ನಾಟಕದ ಹಲವರು ಸಿಲುಕಿಕೊಂಡಿರುವ ಮಾಹಿತಿಯಿದೆ. ಕೊಡಗು ಜಿಲ್ಲೆಯ ಯಾರಾದರೂ ಸೂಡಾನ್ ದೇಶದಲ್ಲಿ ಸಿಲುಕಿದ್ದರೆ, ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರಕ್ಕೆ ಮಾಹಿತಿ ನೀಡಬೇಕೆಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.
ದೂ:- 08272-221077
08272-221099
ವಾಟ್ಸಾಪ್ ಸಂಖ್ಯೆ:- 8550001077












