ಮಡಿಕೇರಿ ಏ.20 : ಮಡಿಕೇರಿ ವಿಧಾನಸಭಾ ಕ್ಷೇತ್ರದ ‘ಬಹುಜನ ಸಮಾಜ ಪಕ್ಷದ ಅಭ್ಯರ್ಥಿ ಎ.ಎ.ದಿವಿಲ್ ಕುಮಾರ್ ಇಂದು ನಾಮಪತ್ರ ಸಲ್ಲಿಸಿದರು.
ಪಕ್ಷದ ಪ್ರಮುಖರೊಂದಿಗೆ ಜಿಲ್ಲಾಡಳಿತ ಭವನಕ್ಕೆ ಆಗಮಿಸಿದ ದಿವಿಲ್ ಕುಮಾರ್ ಮಡಿಕೇರಿ ಕ್ಷೇತ್ರದ ಚುನಾವಣಾಧಿಕಾರಿ ಡಾ.ಯತೀಶ್ ಉಲ್ಲಾಳ್ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಬಿಎಸ್‍ಪಿ ರಾಜ್ಯ ಕಾರ್ಯದರ್ಶಿ ಭೀಮ ಪುತ್ರಿ ರೇವತಿ ರಾಜನ್ , ಬಿಎಸ್‍ಪಿ ಜಿಲ್ಲಾ ಉಪಾಧ್ಯಕ್ಷ ಬೆಳ್ಯಪ್ಪ ಹಾಗೂ ಕಾರ್ಯಕರ್ತ ರವಿ ಹಾಜರಿದ್ದರು.
::: ಮೆರವಣಿಗೆ ::: ನಾಮಪತ್ರ ಸಲ್ಲಿಕೆಗೂ ಮೊದಲು ದಿವಿಲ್ ಕುಮಾರ್ ಮೂರ್ನಾಡು ಬಳಿಯ ಪಾಲೇಮಾಡು ಗ್ರಾಮದ ಕಾನ್ಶಿರಾಮ ನಗರದಿಂದ ಮೆರವಣಿಗೆ ಮೂಲಕ ಆಗಮಿಸಿ ಮೂರ್ನಾಡು, ಹಾಕತ್ತೂರು ಮೂಲಕ ಮಡಿಕೇರಿಗೆ ಆಗಮಿಸಿ, ಸುದರ್ಶನ ವೃತ್ತದ ಫೀ.ಮಾ.ಕೆ.ಎಂ. ಕಾರ್ಯಪ್ಪ ವೃತ್ತ, ಜ.ತಿಮ್ಮಯ್ಯ ವೃತ್ತ, ನಗರ ಠಾಣೆ, ಹಳೇ ಖಾಸಗಿ ಬಸ್ ನಿಲ್ದಾಣ, ಇಂದಿರಾ ಗಾಂಧಿ ವೃತ್ತ ಕ್ಕಾಗಿ ಗಾಂಧಿ ಮೈದಾನದವರೆಗೆ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರೊಂದಿಗೆ ಬೃಹತ್ ಮೆರವಣಿಗೆ ನಡೆಸಿದರು.
:: ಯೋಧರ ಪ್ರತಿಮೆಗಳಿಗೆ ಮಾಲಾರ್ಪಣೆ :: ಈ ಸಂದರ್ಭ ನಗರ ವ್ಯಾಪ್ತಿಯ ವಿವಿಧೆಡೆಗಳಲ್ಲಿರುವ ವೀರಯೋಧರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.