ಮಡಿಕೇರಿ ಏ.20 : ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಮಿಕ ಘಟಕವನ್ನು ಪಕ್ಷದ ಜಿಲ್ಲಾಧ್ಯಕ್ಷರು ಕಡೆಗಣಿಸುತ್ತಿದ್ದಾರೆ ಎಂದು ಆರೋಪಿಸಿರುವ ಘಟಕದ ಜಿಲ್ಲಾಧ್ಯಕ್ಷ ಟಿ.ಡಿ.ಗೋವಿಂದರಾಜ್ ದಾಸ್, ಆರು ಬ್ಲಾಕ್ ಅಧ್ಯಕ್ಷರುಗಳು ರಾಜೀನಾಮೆ ನೀಡುವ ಮೂಲಕ ಕಾರ್ಮಿಕ ಘಟಕವನ್ನು ವಿಸರ್ಜನೆ ಮಾಡಿರುವುದಾಗಿ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಒಂದೂವರೆ ವರ್ಷಗಳಿಂದ ಕೊಡಗು ಜಿಲ್ಲಾ ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷನಾಗಿ ಜಿಲ್ಲೆಯ ಆರು ಬ್ಲಾಕ್‍ಗಳಲ್ಲಿ ಕಾರ್ಮಿಕ ವಿಭಾಗದ ಬ್ಲಾಕ್ ಅಧ್ಯಕ್ಷರನ್ನು ನೇಮಕ ಮಾಡಿದ್ದೇನೆ. ಅಲ್ಲದೆ ವಿವಿಧ ರೀತಿಯ ಕಾರ್ಮಿಕ ಸೇವೆಗಳನ್ನು ಪಕ್ಷದ ಪರವಾಗಿ ಮಾಡಿದ್ದೇನೆ. ನಿರಂತರ ಕಾರ್ಮಿಕರ ಹಾಗೂ ಪಕ್ಷ ಸಂಘಟನೆಗೆ ನೆರವಾಗುವ ರೀತಿಯಲ್ಲಿ ಕಾರ್ಯನಿರ್ವಹಿಸಿದ್ದೇನೆ.
ಆದರೆ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಜಿಲ್ಲೆಯ ಆರು ಬ್ಲಾಕ್ ಅಧ್ಯಕ್ಷರುಗಳು ಕಾರ್ಮಿಕ ಘಟಕದ ಪದಾಧಿಕಾರಿಗಳನ್ನು ಯಾವುದೇ ಸಭೆ, ಸಮಾರಂಭಗಳಿಗೆ ಆಹ್ವಾನಿಸದೆ ಕಡೆಗಣಿಸಿದ್ದಾರೆ ಎಂದು ಆರೋಪಿಸಿದರು.
ನಾನು ಜಿಲ್ಲಾಧ್ಯಕ್ಷನಾಗಿ ಕಾಂಗ್ರೆಸ್ ಸದಸ್ಯತ್ವ ಅಭಿಯಾನದಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲೇ ಅತಿ ಹೆಚ್ಚು 875 ಸದಸ್ಯರನ್ನು ನೋಂದಣಿ ಮಾಡಿದ್ದೇನೆ. ಆದರೂ ಚುನಾವಣಾ ಪ್ರಚಾರ ಕಾರ್ಯದಲ್ಲಿ ನನ್ನನ್ನು ಹಾಗೂ ಕಾರ್ಮಿಕ ಘಟಕದ ಆರು ಬ್ಲಾಕ್ ಅಧ್ಯಕ್ಷರುಗಳನ್ನು ಕೈಬಿಡಲಾಗಿದೆ. ಈ ಬಗ್ಗೆ ಪ್ರಶ್ನಿಸಿದರೆ ನಮ್ಮನ್ನು ಬೆÉದರಿಸುವ ಕಾರ್ಯ ನಡೆಯುತ್ತಿದೆ ಎಂದು ದೂರಿದರು.
ಈ ಬಗ್ಗೆ ರಾಜ್ಯಾಧ್ಯಕ್ಷರಿಗೆ ಕರೆಮಾಡಿ ಮಾತನಾಡಿದರೆ ಅಲ್ಲಿಯೂ ಅಭ್ಯರ್ಥಿ ಹಾಗೂ ಜಿಲ್ಲಾಧ್ಯಕ್ಷರು ನಮ್ಮನ್ನು ಪರಿಗಣಿಸಿಲ್ಲ. ಆದ್ದರಿಂದ ಕಾರ್ಮಿಕ ಘಟಕದ ಆರು ಬ್ಲಾಕ್ ಅಧ್ಯಕ್ಷರುಗಳು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿ ಜಿಲ್ಲಾ ಕಾರ್ಮಿಕ ಘಟಕವನ್ನು ವಿಸರ್ಜನೆ ಮಾಡಿ ಎಂದು ಆದೇಶ ಹೊರಡಿಸಿರುವುದಾಗಿ ಗೋವಿಂದರಾಜ್ ದಾಸ್ ತಿಳಿಸಿದರು.
::: ಮುತ್ತಪ್ಪಗೆ ಬೆಂಬಲ :::
ಈ ಹಿಂದೆ ನಾನು ನಾಪಂಡ ಮುತ್ತಪ್ಪ ಅವರೊಂದಿಗೆ ಕಾರ್ಮಿಕರ ಹಿತಕ್ಕಾಗಿ ಕಾರ್ಯನಿರ್ವಹಿಸಿದ್ದೆ. ನಂತರ ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದೆ. ಆದರೆ ಇದೀಗ ಪಕ್ಷದಲ್ಲಿ ನನ್ನನ್ನು ಪರಿಗಣಿಸದೆ ಇರುವುದರಿಂದ ಜೆಡಿಎಸ್ ಪಕ್ಷದ ಮಡಿಕೇರಿ ಕ್ಷೇತ್ರದ ಅಭ್ಯರ್ಥಿ ನಾಪಂಡ ಮುತ್ತಪ್ಪ ಅವರಿಗೆ ಬೆಂಬಲ ಸೂಚಿಸಲಿದ್ದೇನೆ. ನಾನು ಕಾರ್ಮಿಕರ ಪರವಾಗಿ ಕಾರ್ಯನಿರ್ವಹಿಸುತ್ತೇನೆ ಹೊರತು ಪಕ್ಷಕ್ಕಾಗಿ ಅಲ್ಲ ಎಂದು ಗೋವಿಂದರಾಜ್ ದಾಸ್ ಸ್ಪಷ್ಟಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಘಟಕದ ಜಿಲ್ಲಾ ಉಪಾಧ್ಯಕ್ಷ ಹೆಚ್.ಬಿ.ನಾಗೇಶ್, ಸೋಮವಾರಪೇಟೆ ಬ್ಲಾಕ್ ಅಧ್ಯಕ್ಷ ವೇದಕುಮಾರ್, ಮಡಿಕೇರಿ ಬ್ಲಾಕ್ ಅಧ್ಯಕ್ಷ ಫಯಾಜ್ ಅಹಮ್ಮದ್, ಸದಸ್ಯರಾದ ಪಿ.ಎ.ದೀಪ್ತಿ, ಎಂ.ಅನು ಹಾಗೂ ಕೆ.ವಿ.ಬೇಬಿ ಉಪಸ್ಥಿತರಿದ್ದರು.
Breaking News
- *ದಕ್ಷಿಣ ಕೊಡಗಿನಲ್ಲಿ ಸಣ್ಣ ಕೈಗಾರಿಕಾ ಪ್ರದೇಶಾಭಿವೃದ್ಧಿ : 50 ಏಕರೆ ಭೂಮಿ ಮಂಜೂರಾತಿಗೆ ಆಪ್ ಮನವಿ*
- *ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜು : 8ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ*
- *ರಾಷ್ಟ್ರೀಯ ಜೂನಿಯರ್ ಹಾಕಿ ತಂಡಕ್ಕೆ ಕೊಡಗಿನ ವಿಶ್ವಜಿತ್ ಹಾಗೂ ಪೂಜಿತ್ ಆಯ್ಕೆ*
- *ರಾಷ್ಟ್ರೀಯ ಜೂನಿಯರ್ ಹಾಕಿ ತಂಡಕ್ಕೆ ದೃಶ್ಯ ಅಚ್ಚಪ್ಪ ಆಯ್ಕೆ*
- *ಹೆಬ್ಬಾಲೆ : ಜ.23 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
- *ಶ್ರೀ ರಾಮ ಜನ್ಮಭೂಮಿ ಸೇವಾ ಸಮಿತಿಯಿಂದ ಮಡಿಕೇರಿಯಲ್ಲಿ ಅನ್ನದಾನ*
- *ಜ.26 ರಂದು ಲೋಕಾಪ೯ಣೆಯಾಗಲಿದೆ ಮತ್ತೆ ವಸಂತ*
- *ಹೆಗ್ಗಳ ಗ್ರಾಮದ ಸರ್ಕಾರಿ ಶಾಲೆಗೆ ಕಂಪ್ಯೂಟರ್ ಕೊಡುಗೆ*
- *ಎನ್.ಯು.ನಾಚಪ್ಪ ವಿರುದ್ಧ ಪ್ರಕರಣ : ಮಡಿಕೇರಿ ಕೊಡವ ಸಮಾಜ ಖಂಡನೆ*
- *ವಿರಕ್ತ ಮಠದ ಶ್ರೀ ಬಸವಪ್ರಭು ಸ್ವಾಮೀಜಿಗೆ ಪಿ.ಹೆಚ್.ಡಿ ಪದವಿ*