ಮಡಿಕೇರಿ ಏ.20 : ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಏಪ್ರಿಲ್ 21ರ ಶುಕ್ರವಾರ ಬೆಳಗ್ಗೆ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ತಿಳಿಸಿದೆ. ಮಾರ್ಚ್ ತಿಂಗಳಿನಲ್ಲಿ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು www.karresults.nic.in ಪ್ರಕಟ ಮಾಡಲಾಗುತ್ತದೆ. ಬೆಳಗ್ಗೆ 10 ಗಂಟೆಗೆ ಪರೀಕ್ಷಾ ಮಂಡಳಿಯಿಂದ ಸುದ್ದಿಗೋಷ್ಟಿ ನಡೆಸಲಾಗುತ್ತದೆ. ನಂತರ ಫಲಿತಾಂಶವನ್ನು ಅಧಿಕೃತ ವೆಬ್ಸೈಟ್‌ನಲ್ಲಿ ಪ್ರಕಟ ಮಾಡಲಾಗುತ್ತದೆ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.










