ಮಡಿಕೇರಿ ಏ.20 : ಜವಾಹರ ನವೋದಯ ಪ್ರವೇಶ ಪರೀಕ್ಷೆಯು (6 ನೇ ತರಗತಿಯ ಪ್ರವೇಶಕ್ಕಾಗಿ ನಡೆಯುವ ಈ ಪರೀಕ್ಷೆಯು) ಇದೇ ಏಪ್ರಿಲ್, 29 ರಂದು ಬೆಳಗ್ಗೆ 11.30 ಗಂಟೆಗೆ ಜಿಲ್ಲೆಯ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ.
ಪರೀಕ್ಷಾರ್ಥಿಗಳು ಏಪ್ರಿಲ್, 29 ರಂದು ಬೆಳಗ್ಗೆ 9.30 ಗಂಟೆಗೆ ಪರೀಕ್ಷಾ ಕೇಂದ್ರದಲ್ಲಿ ಹಾಜರಿರಬೇಕು. ಪರೀಕ್ಷಾರ್ಥಿಗಳು ಪರೀಕ್ಷೆಯ ಪ್ರವೇಶಪತ್ರವನ್ನು ನವೋದಯ ವಿದ್ಯಾಲಯ ಸಮಿತಿಯ ಜಾಲತಾಣದಿಂದ www.navodaya.gov.in ಡೌನ್‍ಲೋಡ್ ಮಾಡಿಕೊಳ್ಳಬಹುದು. ಅಥವಾ ಶಾಲಾ ಮುಖ್ಯೋಪಾಧ್ಯಾಯರನ್ನು ಅಥವಾ ಜವಾಹರ ನವೋದಯ ವಿದ್ಯಾಲಯ ಗಾಳಿಬೀಡಿನ ಕಚೇರಿಯನ್ನು ಸಂಪರ್ಕಿಸಿ ಪಡೆಯಬಹುದು. ಹೆಚ್ಚಿನ ಮಾಹಿತಿಗೆ ದೂ.ಸಂ.9611862835, 7760898148 ನ್ನು ಸಂಪರ್ಕಿಸಬಹುದು ಎಂದು ಗಾಳಿಬೀಡು ನವೋದಯ ವಿದ್ಯಾಲಯದ ಪ್ರಾಂಶುಪಾಲರಾದ ಪಂಕಜಾಕ್ಷನ್ ತಿಳಿಸಿದ್ದಾರೆ.
ಪರೀಕ್ಷೆಯು 6 ಕೇಂದ್ರಗಳಲ್ಲಿ ನಡೆಯಲಿದೆ. ಮಡಿಕೇರಿಯ ಸಂತ ಮೈಕಲರ ಪ್ರೌಢಶಾಲೆ, ಸೋಮವಾರಪೇಟೆಯ ಸರ್ಕಾರಿ ಜೂನಿಯರ್ ಕಾಲೇಜು, ಒಎಲ್‍ವಿ ಹಿರಿಯ ಪ್ರಾಥಮಿಕ ಶಾಲೆ, ಫಾತಿಮಾ ಕಾನ್ವೆಂಟ್ ಹಿರಿಯ ಪ್ರಾಥಮಿಕ ಶಾಲೆ, ವಿರಾಜಪೇಟೆಯ ಸಂತ ಅನ್ನಮ್ಮ(ಸೆಂಟ್ ಆನ್ಸ್) ಶಾಲೆ ಹಾಗೂ ಪೊನ್ನಂಪೇಟೆಯ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಪರೀಕ್ಷೆ ನಡೆಯಲಿದೆ.









