ಮಡಿಕೇರಿ ಏ.20 : ಬೆಸ್ಸೂರು ಗ್ರಾ.ಪಂ ವ್ಯಾಪ್ತಿಯ ದೊಡ್ಡಬಂಡಾರ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸುವಂತೆ ಜಿಲ್ಲಾಧಿಕಾರಿ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಇವರಲ್ಲಿ ಗ್ರಾಮಸ್ಥರು ಕೋರಿಕೊಂಡ ಮೇರೆಗೆ ಈ ಸಮಸ್ಯೆಯನ್ನು ಕೂಡಲೇ ಬಗೆಹರಿಸುವಂತೆ ಸಂಬಂಧಿಸಿದ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿಗಳು ಮುಂದಾಗಿದ್ದು, ಬೋರ್‍ವೆಲ್‍ನಲ್ಲಿ ಕೆಟ್ಟುಹೋಗಿದ್ದ ಮೋಟಾರನ್ನು ಸರಿಪಡಿಸಿ ಗ್ರಾಮಸ್ಥರಿಗೆ ಕುಡಿಯುವ ನೀರನ್ನು ಒದಗಿಸಲಾಗಿದೆ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಸುರೇಶ್ ಕುಮಾರ್ ಅವರು ತಿಳಿಸಿದ್ದಾರೆ.









