ಸುಂಟಿಕೊಪ್ಪ ಏ.21 : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಸುಂಟಿಕೊಪ್ಪ ವ್ಯಾಪ್ತಿಯ ಸರಕಾರಿ ಮತ್ತು ಖಾಸಗಿ ಪದವಿ ಪೂರ್ವ ಕಾಲೇಜುಗಳು ಉತ್ತಮ ಸಾಧನೆ ಮಾಡಿರುವುದು ಪೋಷಕರಲ್ಲಿ ಹಾಗೂ ಕಾಲೇಜಿನ ಉಪನ್ಯಾಸಕರಲ್ಲಿ ಹರ್ಷ ಉಂಟು ಮಾಡಿದೆ.
ಸರಕಾರಿ ಪದವಿಪೂರ್ವ ಕಾಲೇಜಿನ ಒಟ್ಟು 86 ವಿದ್ಯಾರ್ಥಿಗಳು ಪರೀಕ್ಷೆಯನ್ನು ಎದುರಿಸಿದ್ದು 70 ಮಕ್ಕಳು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 32ಮಂದಿ, ಕಲಾವಿಭಾಗದಲ್ಲಿ 21 ಮಂದಿ ಮತ್ತು ವಿಜ್ಞಾನ ವಿಭಾಗದಲ್ಲಿ 22ಮಂದಿ ಉತ್ತೀರ್ಣರಾಗಿದ್ದಾರೆ.
ಮತ್ತಿಕಾಡು ಕೃಷ್ಣತೋಟದಲ್ಲಿ ಕೂಲಿ ಕಾರ್ಮಿಕರಾಗಿರುವ ಮೂಲತಃ ಚಾಮರಾಜನಗರ ನಿವಾಸಿಯಾದ ಮಹದೇವ ನಾಯಕ ಮಹದೇವಮ್ಮ ದಂಪತಿಗಳ ಪುತ್ರಿ ಚಾಂದನಿ ವಾಣಿಜ್ಯ ವಿಭಾಗದಲ್ಲಿ 600 ಅಂಕಗಳಿಗೆ 562 ಅಂಕಗಳಿಸಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಚಾಂದನಿಯ ಅಕ್ಕ ಪ್ರೀತಿ ಕೂಡ 2 ವರ್ಷಗಳ ವಾಣಿಜ್ಯ ವಿಭಾಗದಲ್ಲೇ ಅತೀ ಹೆಚ್ಚು ಅಂಕಗಳನ್ನು ಪಡೆದು ಪ್ರಥಮ ಸ್ಥಾನಪಡೆದುಕೊಂಡಿದ್ದರು.
ಪತ್ರಿಕೆಯೊಂದಿಗೆ ಮಾತನಾಡಿದ ಮಹದೇವನಾಯಕ್, ಪುತ್ರಿಯ ಸಾಧನೆ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ್ದಾರೆ. ಈಗಾಗಲೇ ಇಬ್ಬರು ಪುತ್ರಿಯರನ್ನು ವಿವಾಹ ಮಾಡಿಕೊಟ್ಟಿರುವ ಮಹದೇವ ನಾಯಕ ಅವರು ಚಾಂದನಿಯ ತಂಗಿ ಪಲ್ಲವಿ 9ನೇ ತರಗತಿ ಮತ್ತು ತಮ್ಮ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆಂದು ಮಾಹಿತಿ ನೀಡಿದರು.
ಇದೇ ವಿಭಾಗದಲ್ಲಿ ನರೇಂದ್ರ ಮತ್ತು ಹರಿಣಾಕ್ಷಿ ದಂಪತಿಗಳ ಪುತ್ರಿ ಆರ್ಯ ಎಂಬ ವಿದ್ಯಾರ್ಥಿನಿ ವಾಣಿಜ್ಯ ವಿಭಾಗದಲ್ಲಿ 561 ಅಂಕ ಗಳಿಸಿದ್ದಾರೆ.
ಪತ್ರಿಕೆಯೊಂದಿಗೆ ಮಾತನಾಡಿದ ಆರ್ಯಳ ತಂದೆ ನರೇಂದ್ರ ಅವರು ಮಗಳ ಸಾಧನೆಯ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ್ದಾರೆ. ಸೋಮವಾರಪೇಟೆ ನಿವಾಸಿಯಾಗಿರುವ ನರೇಂದ್ರ ಅವರು ಬಡಗಿವೃತ್ತಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಮಗಳನ್ನು ಸುಂಟಿಕೊಪ್ಪದ ಸಹೋದರನ ಮನೆಯಲ್ಲಿ ಇರಿಸಿ ವ್ಯಾಸಂಗ ಮಾಡಿಸಿದ್ದಾರೆ. ಪುತ್ರ 9ನೇ ತರಗತಿ ಮತ್ತು ಇನ್ನೋರ್ವ ಪುತ್ರಿ 1ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆಂದು ನರೇಂದ್ರ ಮಾಹಿತಿ ನೀಡಿದರು.
ಪತ್ರಿಕೆಯೊಂದಿಗೆ ಮಾತನಾಡಿದ ಆರ್ಯ, ಪದವಿ ಮತ್ತು ಸ್ನಾತಕೋತ್ತರ ಪದವಿಪಡೆದು ಯುಪಿಎಸ್‍ಸಿ ಪರೀಕ್ಷೆ ಬರೆಯುವ ಸಿದ್ಧತೆಗಳನ್ನು ಮಾಡಿಕೊಂಡು ಐಎಎಸ್ ಅಧಿಕಾರಿಯಾಗಬೇಕೆಂಬ ಆಶಯ ವ್ಯಕ್ತಪಡಿಸಿದರು.
ಇದೇ ವಿಭಾಗದಲ್ಲಿ ನಿಂಗ ನಾಯಕ ಹಾಗೂ ನಾಗಮ್ಮ ಪುತ್ರಿ ದಾಮಿನಿ 533 ಅಂಕಗಳನ್ನು ಪಡೆದುಕೊಂಡರೆ, ದೊಡ್ಡಸಿದ್ಧ ಶೆಟ್ಟಿ ಭಾಗ್ಯಮ್ಮ ದಂಪತಿಗಳ ಪುತ್ರಿ ಮೇಘಾ 509 ಅಂಕಗಳನ್ನು ಗಳಿಸಿದರು.
ವಿಜ್ಞಾನ ವಿಭಾಗದಲ್ಲಿ 600 ಅಂಕಗಳಿಗೆ 551 ಅಂಕಗಳಿಸಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಆಫ್ಸೀನ ಸಿ.ಎಂ. ಅವರು 521 ಅಂಕಗಳಿಸಿ ಅತ್ತುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ನಾಸೀಯ ಅವರು 513 ಅಂಕಗಳನ್ನುಗಳಿಸಿಕೊಂಡಿದ್ದಾರೆಂದು ಪ್ರಾಂಶುಪಾಲರಾದ ಪಿ.ಯು. ಜಾನ್ ತಿಳಿಸಿದ್ದಾರೆ.
ಸಂತ ಮೇರಿ ಪದವಿ ಪೂರ್ವಕಾಲೇಜಿನಲ್ಲಿ ವಾಣಿಜ್ಯ ವಿಭಾಗ ಮಾತ್ರವಿದ್ದು ಇಲ್ಲಿ 24 ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. 9 ಮಂದಿ ಅತ್ಯುನ್ನತ ಶ್ರೇಣಿಯಲ್ಲಿ 15 ಮಂದಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗುವ ಮೂಲಕ ಶೇ.100 ಫಲಿತಾಂಶ ಪಡೆದು ಸಂಸ್ಥೆಗೆ ಹೆಮ್ಮೆತಂದಿದ್ದಾರೆ.
ಸುಂಟಿಕೊಪ್ಪ ಮಾರುಕಟ್ಟೆ ರಸ್ತೆ ನಿವಾಸಿ ಕೆಎಸ್‍ಆರ್‍ಟಿಸಿ ಬಸ್ ನಿರ್ವಾಹಕ ಎನ್.ಬಿ.ಶ್ರೀನಿವಾಸ್ ಹಾಗೂ ವಿದ್ಯಾ ಶ್ರೀನಿವಾಸ್ ದಂತಿಗಳ ಪುತ್ರಿ ಸಂತಮೇರಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಎನ್.ಎಸ್.ಮಾನ್ಯ ಅವರು 564 ಅಂಕಗಳನ್ನು ಪಡೆದುಕೊಂಡಿದ್ದಾರೆ. ಎ.ಸಿ.ದಿವ್ಯಶ್ರೀ 555 ಅಂಕಗಳನ್ನು ಈ.ಐ.ಇರ್ಫಾನ 553 ಅಂಕಗಳನ್ನು ಪಡೆದು ಮೊದಲ 3 ಸ್ಥಾನಗಳನ್ನು ಪಡೆದಿದ್ದಾರೆಂದು ಕಾಲೇಜಿನ ಪ್ರಾಂಶುಪಾಲರಾದ ಸೇಲ್ವರಾಜ್ ಮಾಹಿತಿ ನೀಡಿದ್ದಾರೆ.
Breaking News
- *ಜಯ ಹೇ ಕರ್ನಾಟಕ ಮಾತೆ ಗೀತೆಗೆ 100 ವರ್ಷ : ಕೊಡಗಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು*
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*