ಪೂಂಚ್ ಏ.21 : ಜಮ್ಮು ಮತ್ತು ಕಾಶ್ಮೀರದ ಪೂಂಚ್ ನಲ್ಲಿ ಐವರು ಯೋಧರ ಸಾವಿಗೆ ಕಾರಣರಾದ ಭಯೋತ್ಪಾದಕರ ವಿರುದ್ಧ ಸೇನಾಪಡೆ ಕಾರ್ಯಾಚರಣೆಯನ್ನು ಚುರುಕುಗೊಳಿಸಿದೆ.
ಗುರುವಾರ ನಡೆದ ಭಯೋತ್ಪಾದಕ ದಾಳಿಯಲ್ಲಿ ಐವರು ಯೋಧರು ಹುತಾತ್ಮರಾಗಿದ್ದು, ಅಡಗಿ ಕುಳಿತಿರುವ ಉಗ್ರರಿಗಾಗಿ ಸೇನಾಪಡೆಗಳು ಶುಕ್ರವಾರ ಭಾರೀ ಕಾರ್ಯಾಚರಣೆ ನಡೆಸುತ್ತಿವೆ.
ದಾಳಿ ನಡೆದ ಸ್ಥಳದ ಸುತ್ತಲೂ ಭದ್ರತಾ ಪಡೆ ಸುತ್ತುವರೆದಿದ್ದು, ಶೋಧ ಕಾರ್ಯಾಚರಣೆ ನಡೆಸುತ್ತಿದೆ. ಉಗ್ರರ ಪತ್ತೆಗೆ ಡ್ರೋಣ್’ಗಳು, ಸ್ನಿಫ್ಪರ್ ಡಾಗ್ ಗಳನ್ನು ಬಳಕೆ ಮಾಡಲಾಗುತ್ತಿದೆ.
ಗಡಿ ಜಿಲ್ಲೆಗಳಾದ ರಜೌರಿ ಹಾಗೂ ಪೂಂಚ್ ನಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದ್ದು, ಗಡಿ ನಿಯಂತ್ರಣ ರೇಖೆ ಬಳಿ ಕಣ್ಗಾವಲನ್ನು ಹೆಚ್ಚಿಸಲಾಗಿದೆ ಎಂದು ಸೇನಾ ಅಧಿಕಾರಿಗಳು ಹೇಳಿದ್ದಾರೆ.
ಗುರುವಾರ ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯ ಭಿಂಬರ್ ಗಲಿ ಪ್ರದೇಶದ ಬಳಿ ಸೇನಾ ವಾಹನವನ್ನು ಗುರಿಯಾಗಿಸಿ ಉಗ್ರರು ದಾಳಿ ನಡೆಸಿದ್ದರು. ಈ ವೇಳೆ ಐವರು ಯೋಧರು ಹುತಾತ್ಮರಾಗಿ, ಓರ್ವ ಯೋಧ ಗಾಯಗೊಂಡಿದ್ದರು.
ದಾಳಿಯಲ್ಲಿ ಮೃತಪಟ್ಟ ಯೋಧರನ್ನು ರಾಷ್ಟ್ರೀಯ ರೈಫಲ್ಸ್ ಘಟಕದ ಮನ್ದೀಪ್ ಸಿಂಗ್, ದೇಬಾಶಿಶ್ ಬಸ್ವಾಲ್, ಕುಲ್ವಂತ್ ಸಿಂಗ್, ಹಕ್ರ‍್ರಿಶನ್ ಸಿಂಗ್ ಮತ್ತು ಸೇವಕ್ ಸಿಂಗ್ ಎಂದು ಗುರುತಿಸಲಾಗಿದೆ.














