ಮಡಿಕೇರಿ ಏ.21 : ಮಡಿಕೇರಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಡಾ.ಮಂಥರ್ ಗೌಡ ಪರ ಮಡಿಕೇರಿ ನಗರ ಕಾಂಗ್ರೆಸ್ ಸಮಿತಿಯಿಂದ ಬಿರುಸಿನ ಚುನಾವಣಾ ಪ್ರಚಾರ ನಡೆಯಿತು.
ನಗರದ ಅಶೋಕಪುರ, ಗುಂಡೂರಾವ್ ಕಾಂಪೌಂಡ್ ಮತ್ತು ಆಕಾಶವಾಣಿ ಬಳಿ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಪಕ್ಷದ ಯೋಜನೆಗಳ ಕುರಿತು ಜನರಿಗೆ ಮಾಹಿತಿ ನೀಡಿ ಅಭ್ಯರ್ಥಿಯ ಗೆಲುವಿಗೆ ಮನವಿ ಮಾಡಿದರು.
ಈ ಸಂದರ್ಭ ಕೊಡಗು ಚುನಾವಣಾ ಉಸ್ತುವಾರಿ ಹೆಚ್.ಎಂ.ನಂದಕುಮಾರ್, ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷ ಟಿ.ಪಿ.ರಮೇಶ್, ಮಡಿಕೇರಿ ನಗರ ಕಾಂಗ್ರೆಸ್ ಅಧ್ಯಕ್ಷ ಬಿ.ವೈ.ರಾಜೇಶ್, ಡಿಸಿಸಿ ಸದಸ್ಯರುಗಳಾದ ಕೆ.ಯು.ಅಬ್ದುಲ್ ರಜಾಕ್, ಚುಮ್ಮಿದೇವಯ್ಯ, ಎಂ.ಎ.ಜಫ್ರುಲ್ಲ, ಟಿ.ಹೆಚ್.ಉದಯ ಕುಮಾರ್, ಪ್ರಕಾಶ್ ಆಚಾರ್ಯ, ಮಡಿಕೇರಿ ನಗರ ಪ್ರಧಾನ ಕಾರ್ಯದರ್ಶಿ ಆರ್.ಪಿ.ಚಂದ್ರಶೇಖರ್, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಸ್.ದೊಳ್‌ಪಾಡಿ, ಅಲ್ಪಸಂಖ್ಯಾತರ ಘಟಕದ ನಗರಾಧ್ಯಕ್ಷ ಕೆ.ಜಿ.ಪೀಟರ್, ಬೂತ್ ಅಧ್ಯಕ್ಷರುಗಳಾದ ನವೀನ್, ಗೀತಾ, ಕುಮಾರ್, ಕವನ್ ಕೆಟೋಳಿ, ಕಾಂಗ್ರೆಸ್ ನಾಯಕರಾದ ಶಮ (ಶಮ್), ಜಯರಾಮ್, ದೇವರಾಜ್, ಜಯಣ್ಣ, ಪ್ರೇಮ ಲಿಂಗಪ್ಪ, ನಗರಸಭಾ ಮಾಜಿ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ, ಸೇವಾದಳದ ಜಿಲ್ಲಾಧ್ಯಕ್ಷ ಕಾನೆಹಿತ್ಲು ಮೊಣ್ಣಪ್ಪ, ಮಹಿಳಾ ಘಟಕದ ನಗರಾಧ್ಯಕ್ಷೆ ಫ್ಯಾನ್ಸಿ ಬೆಳ್ಯಪ್ಪ, ಪ್ರಮುಖರಾದ ಅಂಬೆಕಲ್ ನವೀನ್, ನಿರಂಜನ್, ರಮೇಶ್, ಸುನೀಲ್, ವೆಂಕಪ್ಪ, ಕೆ.ಆರ್.ದಿನೇಶ್ ಹಾಗೂ ಮತ್ತಿತರರ ಕಾರ್ಯಕರ್ತರು ಪಾಲ್ಗೊಂಡಿದ್ದರು.












